ಜೈಪುರ: ರಾಜಸ್ಥಾನದ (Rajasthan) ಬಿಕಾನೇರ್‌ನ ಮಹಾಜನ್‌ನ ಜೈತ್‌ಪುರ ಟೋಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.
ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಅವರು ಹನುಮಾನ್‌ಗಢ್‌ನ ದಬ್ವಾಲಿ ನಿವಾಸಿಗಳಾಗಿದ್ದು, ಹರಿಯಾಣದ ಪರವಾನಗಿ ಪ್ಲೇಟ್ ಹೊಂದಿರುವ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: Maharashtra: ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಎಫ್‌ಐಆರ್!
ಭೀಕರ ಅಪಘಾತಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಇಬ್ಬರು ಪ್ರಯಾಣಿಕರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಇದನ್ನೂ ಓದಿ: ವಿಶ್ವಾದ್ಯಂತ ಸಾಫ್ಟ್‌ವೇರ್ ಸ್ಥಗಿತ – ವಿಮಾನ, ಸ್ಟಾಕ್ ಎಕ್ಸ್‌ಚೇಂಜ್, ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ