ಯಾದಗಿರಿ: ವರಮಹಾಲಕ್ಷ್ಮಿ ಹಬ್ಬಂದದೇ ಭೀಕರ ಅಪಘಾತವೊಂದು ನಡೆದಿದ್ದು, 1 ವರ್ಷದ ಪುಟ್ಟ ಕಂದಮ್ಮ ಸೇರಿ ಒಂದೇ ಕುಟುಂಬದ 6 ಮಂದಿ ದುರ್ಮರಣಕ್ಕೀಡಾದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
Advertisement
ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ಗುರುವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಹಾಗೂ ಉಮೇಜಾ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಹಾಸ್ಟೆಲ್‍ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮೆಡಿಕಲ್ ವಿದ್ಯಾರ್ಥಿಯ ಶವ ಪತ್ತೆ – ಕೊಲೆ ಶಂಕೆ
Advertisement
Advertisement
ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರಾಗಿದ್ದು, ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಹ್ಮದ್ ಪಾಜೀಲ್ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement
ಅವಘಡ ನಡೆದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ಹಾಗೂ ಪಿಐ ದೌವಲತ್ ಕುರಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.