ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಗಾಂಜಾ ಹಾವಳಿ ಹೆಚ್ಚಾಗಿದ್ದು, ದುಷ್ಕರ್ಮಿಗಳು ಗಾಂಜಾ ಗುಂಗಿನಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿದು, ಬಳಿಕ ಅವರ ಬಳಿಯಿದ್ದ ಸುಮಾರು 12 ಸಾವಿರ ರೂ. ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಜಿಲ್ಲೆಯ ಹೊರವಲಯದ ದೊಡ್ಡಿಬೀಳು ಬಳಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಉಂಬ್ಳೇಬೈಲಿನ ಕೃಷ್ಣಮೂರ್ತಿ, ಚರಣ್ ಎಂಬವರಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಪರಿಣಾಮ ಇಬ್ಬರೂ ತೀವ್ರ ಗಾಯಗೊಂಡಿದ್ದು, ಶಿವಮೊಗ್ಗದ ಮೆಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಡಪೆಯುತ್ತಿದ್ದಾರೆ.
Advertisement
Advertisement
ರಾತ್ರಿ ಕೃಷ್ಣಮೂರ್ತಿ ಹಾಗೂ ಚರಣ್ ವಿದ್ಯಾನಗರದಲ್ಲಿ ಕೆಲಸ ಮುಗಿಸಿಕೊಂಡು ಉಂಬ್ಳೇಬೈಲಿಗೆ ಮನೆಗೆ ಬೈಕ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ಎರಡು ಬೈಕ್‍ನಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಇವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಮೊದಲೇ ಗಾಂಜಾ ಗುಂಗಿನಲ್ಲಿದ್ದ ದುಷ್ಕರ್ಮಿಗಳು ಕೃಷ್ಣಮೂರ್ತಿ ಹಾಗೂ ಚರಣ್ ಬೈಕ್ ಅಡ್ಡಹಾಕಿ, ಅವರಿಗೆ ಚಾಕು ಇರಿದಿದ್ದಾರೆ. ಬಳಿಕ ಅವರ ಬಳಿ ಇದ್ದ ಮೊಬೈಲ್ ಫೋನ್ಸ್ ಹಾಗೂ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
Advertisement
ಸದ್ಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಬಳಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv