ಬೀದರ್: ಜಿಲ್ಲೆಯಲ್ಲಿ ಕೃಷ್ಣಮೃಗ ಬೇಟೆಯಾಡಿದ್ದ ಒಟ್ಟು ಆರು ಜನರ ಪೈಕಿ ಪರಾರಿಯಾಗಿದ್ದ ಮೂವರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿಯ ಸೋಹೆಬ್ ಮಲ್ಲಿಕ್, ಹೈದ್ರಾಬಾದ್ (Hyderabad) ಮೂಲದ ಅಬ್ದುಲ್ ಸಾಹಿದ್ & ಹಮೀದ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹೈದ್ರಾಬಾದ್ ಮೂಲದ ನಾಸೀರ್, ಆರೀಫ್ ಖಾನ್ ಮತ್ತು ಮಹ್ಮದ್ ಹಜ್ಜಿ ಮೂವರನ್ನು ಬಂಧಿಸಿದ್ದು, ಒಟ್ಟು ಆರು ಜನರನ್ನು ಬಂಧಿಸದಂತಾಗಿದೆ. ಇದನ್ನೂ ಓದಿ: ‘3 ದೊಡ್ಡ ಹಗರಣ ಬಯಲಿಗೆಳೆಯುತ್ತೇನೆ’ – ಕೇಜ್ರಿವಾಲ್, ಸತ್ಯೇಂದ್ರ ಜೈನ್‌ಗೆ ಸುಕೇಶ್ ಚಂದ್ರಶೇಖರ್ ಪತ್ರ
ಬೀದರ್ ತಾಲೂಕಿನ ಚೊಂಡಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದ ಬೇಟೆಗಾರರನ್ನು ನೋಡಿ ಈ ಬಗ್ಗೆ ಜನವಾಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಗ್ರಾಮಸ್ಥರ ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಬರುತ್ತಿದ್ದಂತೆ ಮೂವರು ಬೇಟೆಗಾರರು ಕಾಲ್ಕಿತ್ತಿದ್ದರು. ಈ ವೇಳೆ ಮೂವರು ಸಿಕ್ಕಿಬಿದ್ದಿದ್ದು, ಮೂವರು ಪರಾರಿಯಾಗಿದ್ರು.
ಅರೆಸ್ಟ್ ವೇಳೆ ಬೇಟೆಗೆ ಬಳಸಿದ ಬಂದೂಕು ಹಾಗೂ ವಾಹನ ಪತ್ತೆಯಾಗಿದ್ದು, ಸದ್ಯ ಜನವಾಡ ಪೊಲೀಸರು, ಆರು ಜನ ಆರೋಪಿಗಳನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದಾರೆ.ಇದನ್ನೂ ಓದಿ: ಪರಸ್ಪರ ಒಪ್ಪಿಗೆಯ ಲಿವ್ ಇನ್ ಸಂಬಂಧ ಮದುವೆಗೆ ಸಮಾನ: ದೆಹಲಿ ಹೈಕೋರ್ಟ್


