ಲಕ್ನೋ: ಶಾಲಾ ವ್ಯಾನ್ (School Van) ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ (Accident) ಆರು ವಿದ್ಯಾರ್ಥಿಗಳು (students) ಹಾಗೂ ವ್ಯಾನ್ ಚಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ಬುಡೌನ್‍ನಲ್ಲಿ ನಡೆದಿದೆ.
ಖಾಸಗಿ ಶಾಲೆಯ ವಾಹನ ವಿದ್ಯಾರ್ಥಿಗಳನ್ನು ಇಂದು ಬೆಳಗ್ಗೆ ಶಾಲೆಗೆ ಕರೆದೊಯ್ಯುವ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಮಾರು 16 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಚಾಲಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ನಾಲ್ಕು ಜನ ವಿದ್ಯಾರ್ಥಿಗಳು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಪಕ್ಷಗಳ ಹಣದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಮತದಾರರಿಗೆ ಇಲ್ಲ- ಸುಪ್ರೀಂಗೆ ಕೇಂದ್ರ ಸರ್ಕಾರದ ಹೇಳಿಕೆ
ಆಸ್ಪತ್ರೆಯ ಆವರಣದಲ್ಲಿ ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗಾಯಗೊಂಡವರ ಪಾಲಕರು ತಮ್ಮ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಮನೋಜ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದ್ದಾರೆ. ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: Kerala Bomb Blast: ಅತ್ತೆ ಕುಳಿತಿದ್ದ ಜಾಗ ತಪ್ಪಿಸಿ ಬಾಂಬ್ ಇಟ್ಟಿದ್ದೆ: ಆರೋಪಿ ಬಾಯ್ಬಿಟ್ಟ ಸತ್ಯವೇನು?
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]