ಗಾಂಧಿನಗರ: ಆರು ಅಂತಸ್ತಿನ ಕಟ್ಟಡ (Building Collapse) ಕುಸಿದು ಬಿದ್ದ ಪರಿಣಾಮ 15 ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ಸೂರತ್‌ನ (Surat) ಸಚಿನ್ ಪಾಲಿ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಹಲವರು ಕಟ್ಟಡದ ಕೆಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ಕುಸಿತದಿಂದ 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಂತೆ ಗುಜರಾತ್‌ನಲ್ಲೂ ಬಿಜೆಪಿ ಸೋಲಿಸುತ್ತೇವೆ: ರಾಹುಲ್ ಗಾಂಧಿ ಶಪಥ
ಅಧಿಕಾರಿಗಳ ಪ್ರಕಾರ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕಟ್ಟಡ ಶಿಥಿಲಾವಸ್ಥೆಯಲ್ಲಿತ್ತು. ಇಂದು ಈ ಕಟ್ಟಡ ಕುಸಿದು ಬಿದ್ದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಮತ್ತೊಂದು ಝಿಕಾ ವೈರಸ್ ಕೇಸ್ ಪತ್ತೆ – ಡೆಂಗ್ಯೂ ನಡುವೆ ಹೆಚ್ಚಾಯ್ತು ಆತಂಕ!