ಆಟೋ ರಿಕ್ಷಾ, ಖಾಸಗಿ ಬಸ್ ಡಿಕ್ಕಿ – 6 ಮಹಿಳೆಯರು ಸಾವು, ನಾಲ್ವರಿಗೆ ಗಾಯ

Public TV
1 Min Read
ACCIDENT

ಅಮರಾವತಿ: ಆಟೋ ರಿಕ್ಷಾಗೆ (Auto Rickshaw) ಖಾಸಗಿ ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ 6 ಮಹಿಳೆಯರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಕಾಕಿನಾಡ (Kakinada) ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ತಲ್ಲರೇವು ಮಂಡಲದ ಸೀತಾರಾಮಪುರಂ ಬಳಿ ರಾಷ್ಟ್ರೀಯ ಹೆದ್ದಾರಿ 216ರಲ್ಲಿ ಅಪಘಾತ (Accident) ಸಂಭವಿಸಿದ್ದು, 6 ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹಾಗೂ ಗಾಯಾಳುಗಳು ಯಾನಂನ ನೀಲಪಲ್ಲಿಯವರಾಗಿದ್ದು, ಸೀಗಡಿ ಘಟಕದ ಉದ್ಯೋಗಿಗಳಾಗಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಿಯಾದ್‌ನಿಂದ ಹೈದರಾಬಾದ್‌ಗೆ ಅಕ್ರಮ ಚಿನ್ನ ಸಾಗಾಟ – 67 ಲಕ್ಷ ರೂ. ಮೌಲ್ಯದ ಚಿನ್ನ ವಶ

ನಾಲ್ವರು ಗಾಯಾಳುಗಳನ್ನು ಕಾಕಿನಾಡ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಲ್ಲದೇ ಅಪಘಾತ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಪತ್ತೆ ಹಚ್ಚುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಧಾರ್ಮಿಕ ಪೋಸ್ಟ್‌ಗೆ ನಡೀತು ಭಾರೀ ಘರ್ಷಣೆ – 1 ಸಾವು, 8 ಮಂದಿಗೆ ಗಾಯ

Share This Article