ಗಾಂಧಿನಗರ: ಗುಜರಾತ್ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.
ಅಹಮದಾಬಾದ್ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ದ್ರಾವಕ ಭಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ- ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿ
Advertisement
Advertisement
ರಿಯಾಕ್ಟರ್ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಅಲ್ಲೇ ಇದ್ದ 6 ಮಂದಿ ಮೃತಪಟ್ಟಿದ್ದಾರೆ. ನಂತರ ಬೆಂಕಿಯನ್ನು ನಿಯಂತ್ರಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದರ ಹೊರತಾಗಿ ಯಾರೂ ಗಾಯಗೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಸರ್ಕಾರ