ಲಕ್ನೋ: ಸರ್ಕಾರಿ ಪ್ರಾಥಮಿಕ ಶಾಲೆಯ ಕಬ್ಬಿಣದ ಗೇಟ್ ಕುಸಿದು ಬಿದ್ದು, 6 ವರ್ಷದ ಬಾಲಕ ಅವಶೇಷಗಳಡಿ ಹೂತುಹೊಗಿ ಮೃತಪಟ್ಟ ಘಟನೆ ನಡೆದಿದೆ. ಕಬ್ಬಿಣದ ಗೇಟ್ ಅನ್ನು ಕೇವಲ 2 ತಿಂಗಳ ಹಿಂದೆಯಷ್ಟೇ ಜೋಡಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಬರುವಾ ಹುಸೇನಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಮೃತ ಬಾಲಕ ಅಖಿಲೇಶ್(6) ಎಂಬುದು ತಿಳಿದು ಬಂದಿದೆ.
Advertisement
ಸರ್ಕಾರಿ ಕಾರ್ಯಕ್ರಮವೊಂದರ ಅಡಿಯಲ್ಲಿ 2021ರ ಅಕ್ಟೋಬರ್ ತಿಂಗಳಿನಲ್ಲಿ ಗೇಟ್ ಅನ್ನು ಸ್ಥಾಪಿಸಲಾಗಿತ್ತು. ಗುರುವಾರ ಮಧ್ಯಾಹ್ನ ಅಖಿಲೇಶ್ ಶಾಲೆಯ ಗೇಟ್ ಬಳಿ ಆಟವಾಡುತ್ತಿದ್ದಾಗ ಏಕಾಏಕಿ ಬಿದ್ದಿದೆ. ಇದನ್ನೂ ಓದಿ: ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ
Advertisement
Advertisement
ಬಾಲಕ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾನೆ. ಆತನ ದೇಹವನ್ನು ಮರಣೋತ್ತರ ಪರೀಕ್ಷೆಗೆ ರಾವಾನಿಸಲಾಗಿದೆ. ಶಾಲೆಯ ಗೇಟ್ ಕುಸಿದು ಬಾಲಕ ಸಾವನ್ನಪ್ಪಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಬೇಡಿಕೆ
Advertisement
ಘಟನೆಯ ಹಿಂದೆ ಕಿಡಿಗೇಡಿಗಳ ಕೈವಾಡವಿದ್ದರೆ, ಅವರಿಗೆ ಖಂಡಿತವಾಗಿಯೂ ಶಿಕ್ಷೆಯಾಗುತ್ತದೆ. ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ನೆರವು ನೀಡಲಾಗುವುದು ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಘಟನೆ ಭೂತಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.