ಅಮರಾವತಿ: ಹೋಂ ವರ್ಕ್ ಮಾಡದಿದ್ದಕ್ಕೆ ಶಿಕ್ಷಕಿ ಹಲ್ಲೆ ನಡೆಸಿದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ವಿಶಾಖಪಟ್ಟಣಂನ (Visakhapatnam) ಖಾಸಗಿ ಶಾಲೆಯಲ್ಲಿ ನಡೆದಿದೆ.
ಶಿಕ್ಷಕಿ ಕೋಲಿನಿಂದ ಹೊಡೆದ ನಂತರ ವಿದ್ಯಾರ್ಥಿ ತೇಜ ಕುಸಿದು ಬಿದ್ದ. ಆತನನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿ, ಯುವತಿ ಸಾವು; ರಾಜ್ಯಸಭಾ ಎಂಪಿ ಪುತ್ರನ ವಿರುದ್ದ ಕೇಸ್ ದಾಖಲು
ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಸಾವಿನ ಕುರಿತು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸಾವಿನ ಸುದ್ದಿ ತಿಳಿದ ನಂತರ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಆಸ್ಪತ್ರೆಯಲ್ಲಿ ಜಮಾಯಿಸಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸೂಕ್ಷ್ಮವಾಗಿ, ಜವಾಬ್ದಾರಿಯುತವಾಗಿ ಮತ್ತು ಮಾನವೀಯತೆಯಿಂದ ವರ್ತಿಸುವಂತೆ ಅಗತ್ಯ ಸಂವೇದನಾಶೀಲ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೂವರು ಸದಸ್ಯರ ಸಮಿತಿಯ ವರದಿಯ ಆಧಾರದ ಮೇಲೆ ಮತ್ತಷ್ಟು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದಿದೆ. ಇದನ್ನೂ ಓದಿ: ಹೊರಗೆ ಬರುತ್ತಿದ್ದಾಗ್ಲೇ ಕೆಳಗೆ ಹೋದ ಲಿಫ್ಟ್ – ಮಧ್ಯದಲ್ಲಿ ಸಿಲುಕಿ ಮಹಿಳೆ ಸಾವು, ವಿಡಿಯೋ ವೈರಲ್

