ಜೋರತ್: ತಂದೆಯ ಸ್ನೇಹಿತನೇ 6 ವರ್ಷದ ಮಗುವನ್ನು ಅತ್ಯಾಚಾರ ಮಾಡಿದ ಘಟನೆ ಅಸ್ಸಾಂನ ಜೋರತ್ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿಯ ಪೋಷಕರು ನಾ-ಅಲಿ ಬೋಲಿಯಾಗೋಹೇನ್ ಫುಕುರಿ ನಗರದಿಂದ ಔಷಧಿ ತರಲು ಹೋಗುವಾಗ ತನ್ನ ಸ್ನೇಹಿತನಿಗೆ ಮಗುವನ್ನು ನೋಡಿಕೊಳ್ಳುವುದಾಗಿ ಹೇಳಿ ಹೋಗಿದ್ದರು. ಈ ಸಮಯದಲ್ಲಿ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಪೋಷಕರು ಹಿಂತಿರುಗಿದಾಗ ಮಗು ಅಳುತ್ತಿದ್ದು, ಗುಪ್ತಾಂಗದಲ್ಲಿ ನೋವಾಗುತ್ತಿದೆ ಎಂದು ಹೇಳಿದ್ದಾಳೆ. ತಕ್ಷಣ ಪೋಷಕರು ಬಾಲಕಿಯನ್ನು ಜೋರತ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಗ ಮಗುವಿನ ಮೇಲೆ ಅತ್ಯಾಚಾರ ನಡೆದಿರೋದು ವೈದ್ಯರು ದೃಢಪಡಿಸಿದ್ದರು.
ಇದಾದ ಬಳಿಕ ಬಾಲಕಿಯ ತಂದೆ ಆರೋಪಿಯನ್ನು ಹುಡುಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಮಾಡಿಸಿದ ಮೇಲೆ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.