60 ಜನ ಕಾಂಗ್ರೆಸ್‌ನವರು ನಮ್ಮೊಟ್ಟಿಗೆ ಬರಲು ರೆಡಿಯಾಗಿದ್ದರು – ಯತ್ನಾಳ್ ಬಾಂಬ್

Public TV
2 Min Read
Basanagouda Patil Yatnal

-ನೋ ಆಪರೇಷನ್, ಓನ್ಲಿ ಕಾಂಗ್ರೆಸ್ ಡೈವರ್ಷನ್ ಎಂದ ಶಾಸಕ

ವಿಜಯಪುರ: ಕಾಂಗ್ರೆಸ್‌ನ (Congress) ಸಾಕಷ್ಟು ಜನ ನಮಗೆ ಅಪ್ರೋಚ್ ಮಾಡಿದ್ದರು, 60 ಜನ ನಮ್ಮೊಟ್ಟಿಗೆ ಬರಲು ರೆಡಿಯಾಗಿದ್ದರು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal)  ಹೇಳಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಆಗುತ್ತಿಲ್ಲ. ಹೀಗಾಗಿ ನಮ್ಮ ಕ್ಷೇತ್ರಕ್ಕೆ ದುಡ್ಡು ಸಿಗುತ್ತಿಲ್ಲ ಎಂದು ನನ್ನ ಜೊತೆ ಸಾಕಷ್ಟು ಜನ ಮಾತನಾಡಿದರು. ಸಾಕಷ್ಟು ಜನ ನಮಗೆ ಅಪ್ರೋಚ್ ಮಾಡಿ, ನಾವು ಒಂದಿಷ್ಟು ಜನ ಕಾಂಗ್ರೆಸ್ ಬಿಟ್ಟು ಬರ್ತೀವಿ ಎಂದು ಹೇಳಿದ್ದರು. ಜೊತೆಗೆ ಕಾಂಗ್ರೆಸ್ ಸರ್ಕಾರವನ್ನು ತೆಗೆದು ಹಾಕೋಣ ಎಂದಿದ್ದರು. ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರ ಉರುಳಿಸಲು ಪ್ಲಾನ್ ನಡೆದಿತ್ತಾ? ಎಂಬ ಸ್ಪೋಟಕ ಮಾಹಿತಿಯನ್ನು ಹೊರಹಾಕಿದರು.ಇದನ್ನೂ ಓದಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ ಕೇಸ್‌ – ಸಂಜಯ್‌ ರಾಯ್‌ ದೋಷಿ

ಇದೇ ವೇಳೆ ಸತೀಶ್ ಜಾರಕಿಹೊಳಿ (Satish Jarkiholi) ಟೀಂ ವಿದೇಶ ಪ್ರಯಾಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸತೀಶ್ ಜಾರಕಿಹೊಳಿ ಸಿಎಂ ಪರವಾಗಿರುವ ವ್ಯಕ್ತಿ. ಇದರ ಹಿಂದೆ ಸಿದ್ದರಾಮಯ್ಯನವರೇ (CM Siddaramaiah) ಇರಬಹುದು. ಇನ್ನೂ ಕಳೆದ ವರ್ಷವೇ ಸತೀಶ್ ಜಾರಕಿಹೊಳಿ ಬೆಂಬಲಿಗರು ದುಬೈಗೆ ಹೋಗುವ ಪ್ಲಾನ್ ಇತ್ತು. ಸತೀಶ್ ಜಾರಕಿಹೊಳಿ ಹಾಗೂ ಸಿದ್ದರಾಮಯ್ಯನವರು ಎಲ್ಲರೂ ಒಂದೇ ಆಗಿದ್ದಾರೆ. ಅಲ್ಲಿ ಎಲ್ಲವೂ ಸಿದ್ದರಾಮಯ್ಯನವರ ನಿರ್ದೇಶನದಂತೆ ನಡೆಯುತ್ತದೆ. ಒಟ್ಟಾರೆ ಕಾಂಗ್ರೆಸ್‌ನಲ್ಲಿ ಗುಂಪು ರಾಜಕೀಯಕ್ಕೆ ರಾಷ್ಟ್ರೀಯ ಅಧ್ಯಕ್ಷರು ಎಚ್ಚರಿಕೆ ಕೊಟ್ಟರೂ ಸಹ ಕೇರ್ ಮಾಡುತ್ತಿಲ್ಲ. ಇದರ ಅರ್ಥ ಸರ್ಕಾರದಲ್ಲಿ ಅಸಮಾಧಾನದ ಹೊಗೆ ಇದೆ ಎಂದರ್ಥ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಕಾರ್ಯಕರ್ತರನಿಗೂ ನಿಲ್ಲುವ ಹಕ್ಕಿದೆ. ವಿಜಯೇಂದ್ರ ಸ್ಪರ್ಧೆ ಮಾಡುತ್ತಿದ್ದರೆ ಮಾಡಲಿ, ಚುನಾವಣೆ ಆಗಿದ್ದೇ ಆದಲ್ಲಿ ನಾವು ಕೂಡ ಯೋಚನೆ ಮಾಡಿದ್ದೇವೆ, ಅದನ್ನು ಆಗ ಪ್ರಕಟಣೆ ಮಾಡುತ್ತೇವೆ. ಚುನಾವಣೆ ನಡೆದರೆ ಯರ‍್ಯಾರು ಸ್ಪರ್ಧಿಸುತ್ತಾರೆ ಎಂದು ನೋಡಬೇಕು. ನಮ್ಮ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರ ಗುಂಪಿನಲ್ಲಿ ಚರ್ಚೆ ಮಾಡುತ್ತೇವೆ. ಸದ್ಯ ಈಗಿನ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ಆಗುತ್ತಿದೆ. ಅದು ಪಾರದರ್ಶಕವಾಗಿ ನಡೆಯಬೇಕು. ಮುಂದೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾಧ್ಯಕ್ಷರುಗಳು ಮತದಾನ ಮಾಡುತ್ತಾರೆ. ಆಗ ಅವರಿಗೆ ಒತ್ತಡ ಹೇರಿದಂತಾಗುತ್ತದೆ ಎಂದರು.

ವಿಜಯೇಂದ್ರ (BY Vijayendra) ಕಲೆಕ್ಷನ್ ಮಾಸ್ಟರ್, ಯಡಿಯೂರಪ್ಪ ಅವರನ್ನ ಜೈಲಿಗೆ ಕಳಿಸಿದ್ದೆ ವಿಜಯೇಂದ್ರ. ಸುಮ್ಮನೆ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಬಿಡು. ನಮ್ಮ ಕೈಯಲ್ಲಿ ಪಕ್ಷ ಸಿಕ್ಕರೆ 130 ಸೀಟ್ ತರುತ್ತೇವೆ. ಇಲ್ಲವಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸವಾಲ್ ಹಾಕಿದರು. ದೇವರಾಣೆ ಮಾಡಿ ಹೇಳುತ್ತೇನೆ. ಈಗಲೂ 60 ಮಂದಿ ಬಿಜೆಪಿಗೆ ಬರಲು ರೆಡಿಯಾಗಿದ್ದಾರೆ. ಆದರೆ ನಾವು ಆಪರೇಷನ್ ಮಾಡಲ್ಲ. ಕಾಂಗ್ರೆಸ್ ಶಾಸಕರು ಬರಬೇಕು ಎನ್ನುವ ಇಚ್ಛೆ ನಮಗೆ ಇಲ್ಲ. ಅವರು ಬಂದರೆ ಬಿಜೆಪಿಯ ಸಿದ್ಧಾಂತಗಳು ಹಾಳಾಗುತ್ತವೆ. ಹಿಂದೂಗಳ ಮೇಲೆ ಅತ್ಯಾಚಾರವಾಗುತ್ತದೆ, ಲವ್ ಜಿಹಾದ್ ನಡೆಯುತ್ತವೆ. ಎಲ್ಲರನ್ನು ತೆಗೆದುಕೊಂಡರೆ ನಮ್ಮ ಸಿದ್ಧಾಂತ ಬಲಿಯಾಗುತ್ತೇವೆ. ಈ ಬಾರಿ ಬಲಿಯಾಗುವುದು ಬೇಡ ಎಂದು ಸುಮ್ಮನಿದ್ದೇವೆ. ನೋ ಆಪರೇಷನ್, ಓನ್ಲಿ ಕಾಂಗ್ರೆಸ್ ಡೈವರ್ಷನ್. ಮುಂದಿನ ಚುನಾವಣೆಯಲ್ಲಿ ಜನ ಬಿಜೆಪಿಗೆ ಪರ್ಮಿಷನ್ ಕೊಡುತ್ತಾರೆ. ನಾವು ಆಯ್ಕೆಯಾಗ್ತೀವಿ, ಸರ್ಕಾರ ನಡೆಸುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ಇಡಿಯಿಂದ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ – ಮುಡಾ ಕೇಸ್‌ ಸಿಬಿಐಗೆ ನೀಡಬೇಕು: ಅಶೋಕ್‌

Share This Article