ಗಾಂಧೀನಗರ: ಈಚೆಗಷ್ಟೇ ನವೀಕರಣಗೊಂಡು ಉದ್ಘಾಟನೆಯಾಗಿದ್ದ ಗುಜರಾತ್‌ನ (Gujarat) ತೂಗು ಸೇತುವೆ (Cable Bridge Collapse) ಕುಸಿತದಿಂದಾಗಿ ಈವರೆಗೆ 60 ಮಂದಿ ಸಾವನ್ನಪ್ಪಿದ್ದು, ನೂರಾರು ಅಪಾಯದಲ್ಲಿ ಸಿಲುಕಿದ್ದಾರೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.
ಕುಸಿತದ ವೇಳೆ ಸೇತುವೆ ಮೇಲೆ 500ಕ್ಕೂ ಹೆಚ್ಚು ಮಂದಿ ಇದ್ದರು. ಕುಸಿತದಿಂದಾಗಿ ಇನ್ನೂ 100ಕ್ಕೂ ಹೆಚ್ಚು ಮಂದಿ ನೀರುಪಾಲಾಗಿದ್ದಾರೆ. ಅಪಾಯದಲ್ಲಿದ್ದವರ ರಕ್ಷಣೆ ಕಾರ್ಯಾಚರಣೆ ಭರದಿಂದ ಸಾಗಿದೆ. ಇದನ್ನೂ ಓದಿ: 5 ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಗುಜರಾತ್‌ನ ಕೇಬಲ್ ಸೇತುವೆ ಕುಸಿತ – ಅಪಾಯದಲ್ಲಿ 100ಕ್ಕೂ ಹೆಚ್ಚು ಮಂದಿ
Advertisement
Advertisement
ಇಂದು ಗುಜರಾತ್‌ನಲ್ಲಿದ್ದ ಪ್ರಧಾನಿ ನರೇಂದ್ರ ಅವರು ತುರ್ತು ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಿದ್ದಾರೆ. ಗಾಯಾಳುಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಹಲವು ಸ್ಥಳೀಯರು ಸಹ ಕೈಜೋಡಿಸಿದ್ದಾರೆ. ಪ್ರಧಾನಿಯವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುವಂತೆ ಹೇಳಿದರು. ಅಪಘಾತದ ಸುದ್ದಿ ಬರುತ್ತಿದ್ದಂತೆ ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮೊರ್ಬಿಗೆ ಧಾವಿಸಿದ್ದಾರೆ.
Advertisement
ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ರಾಜ್ಯ ಸರ್ಕಾರ ನೀಡಲಿದೆ. ಇದನ್ನೂ ಓದಿ: 50ಕ್ಕೂ ಹೆಚ್ಚು ಜನರನ್ನು ಹೊತ್ತು ಹಳ್ಳದಾಟುತ್ತಿದ್ದಾಗ ಸಿಲುಕಿದ ಲಾರಿ
Advertisement
ಮೊರಬಿ ಪಟ್ಟಣಕ್ಕೆ ಭೇಟಿ ನೀಡುವ ಪ್ರವಾಸಿಗರ ಪ್ರಮುಖ ಆಕರ್ಷಣಿಯ ಕೇಂದ್ರವಾಗುರುವ ತೂಗು ಸೇತುವೆ ಇದಾಗಿದೆ. ಸೇತುವೆಯ ನವೀಕರಣಕ್ಕೆ ಖಾಸಗಿ ಒಡೆತನದ ಒರೆವಾ ಕಂಪನಿಗೆ ನೀಡಲಾಗಿತ್ತು. ಶಿಥಿಲಗೊಂಡಿದ್ದ ಹಿನ್ನೆಲೆ ನವೀಕರಣಕ್ಕೆ ನೀಡಲಾಗಿತ್ತು. ನವೀಕರಣಕ್ಕಾಗಿ ಆರು ತಿಂಗಳ ಹಿಂದೆ ಬಂದ್ ಮಾಡಲಾಗಿತ್ತು. ಎರಡು ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿತ್ತು. 2001 ರಲ್ಲಿ ಗುಜರಾತ್‌ನಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ ಮೊದಲ ಬಾರಿಗೆ ಸೇತುವೆಯು ಹಾನಿಗೊಳಗಾಗಿತ್ತು. 140 ವರ್ಷದ ಹಳೆಯ ತೂಗು ಸೇತುವೆ ಇದಾಗಿತ್ತು.