ಶಿಮ್ಲಾ: ವಾಹನವೊಂದು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು 6 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದೆ.
ಈ ಅವಘಡದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement
ಅಪಘಾತಕ್ಕೆ ಕಾರಣವೇನು?
ವಾಹನ ಓವರ್ ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಕೇತಿ ಖುದ್ ನದಿಗೆ ಬಿದ್ದು ಈ ಅಪಘಾತ ಸಂಭವಿಸಿದೆ. 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿರುವವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Advertisement
Himachal Pradesh: Seven killed, one injured after a vehicle fell down in Suketi Khad water stream near Pullghrat area of Mandi district at around 3 am today pic.twitter.com/aGXB40GXny
— ANI (@ANI) November 16, 2020
Advertisement
ಐಪಿಸಿ ಸೆಕ್ಷನ್ 279 (ರ್ಯಾಶ್ ಡ್ರೈವಿಂಗ್), ಸೆಕ್ಷನ್ 338 (ಯಾವುದೇ ವ್ಯಕ್ತಿಗೆ ತೀವ್ರ ನೋವನ್ನುಂಟು ಮಾಡುತ್ತಾರೆ) ಮತ್ತು ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗಿದ್ದಾರೆ) ಅಡಿಯಲ್ಲಿ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Advertisement
हिमाचल प्रदेश के मंडी में सड़क हादसे की खबर से अत्यंत दुख हुआ है। सरकार राहत और बचाव कार्य में जुटी हुई है। इस दुर्घटना में मृतकों के परिजनों के प्रति गहरी संवेदना प्रकट करता हूं और घायलों के जल्द स्वस्थ होने की कामना करता हूं : PM @narendramodi
— PMO India (@PMOIndia) November 16, 2020
ರಸ್ತೆ ಅಪಘಾತದಲ್ಲಿ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಸರ್ಕಾರವು ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.