LatestMain PostNational

ಚುನಾವಣೆ ವಿಜಯ ಸಂಭ್ರಮದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ – 62 ಮಂದಿ ವಿರುದ್ಧ ಪ್ರಕರಣ

ರಾಂಚಿ: ಜಾರ್ಖಂಡ್‌ನ ಹಜಾರಿಬಾದ್ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣಾ ವಿಜಯದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಘಟನೆ ನಡೆದಿದೆ. ಇದರ ಆರೋಪದ ಮೇಲೆ 62 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಜಾರ್ ಸಮಿತಿ ಹೊರಗಡೆ ನಡೆದ ಮೆರವಣಿಗೆ ವೀಡಿಯೋದಲ್ಲಿ ಜನರ ಗುಂಪು ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಕಂಡುಬಂದಿದೆ. ತಕ್ಷಣವೇ ಪೊಲೀಸರು ಎಚ್ಚರಗೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಯಾವ ಆರೋಪಿಯನ್ನೂ ಬಂಧಿಸಲಾಗಿಲ್ಲ. ವೀಡಿಯೋ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹಜಾರಿಬಾದ್ ಪೊಲೀಸ್ ಅಧೀಕ್ಷಕ(ಎಸ್‌ಪಿ) ಮನೋಜ್ ರತನ್ ಚೋಥೆ ತಿಳಿಸಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ಹರಿದು ಅಪಮಾನ

police (1)

ವೀಡಿಯೋ ಹಿಂದಿನ ಸತ್ಯವನ್ನು ಕಂಡುಹಿಡಿಯಲು ನಮ್ಮ ತಂಡ ಕಾರ್ಯನಿರ್ವಹಿಸುತ್ತಿದೆ. ಘಟನೆಯ ಅಸಲಿಯತ್ತು ಏನೆಂದು ತಿಳಿದು ಬಂದರೆ, ಅದರಲ್ಲಿ ಭಾಗಿಯಾದ ಪ್ರತಿಯೊಬ್ಬರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ

ಇತ್ತೀಚೆಗೆ ಪಂಚಾಯತ್ ಚುನಾವಣೆಯಲ್ಲಿ ಗೆದ್ದಿದ್ದ ಸ್ಥಳೀಯ ನಾಯಕಿ ಅಮಿನಾ ಖಾತೂನ್ ಬೆಂಬಲಿಗರು ಮೆರವಣಿಗೆ ನಡೆಸಿದ್ದರು. ಇದೇ ಮೆರವಣಿಗೆಯಲ್ಲಿ ಘಟನೆ ನಡೆದಿದ್ದು, ಒಟ್ಟು 62 ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರಲ್ಲಿ 12 ಆರೋಪಿಗಳನ್ನು ಗುರುತಿಸಲಾಗಿದ್ದು, 50 ಆರೋಪಿಗಳು ಅಪರಿಚಿತರಾಗಿದ್ದಾರೆ.

Leave a Reply

Your email address will not be published.

Back to top button