ಅಗರ್ತಲಾ: ಇಬ್ಬರು ಮಕ್ಕಳು ಸೇರಿ ತಾಯಿಯನ್ನು (Mother) ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದ ಅಮಾನವೀಯ ಘಟನೆ ಪಶ್ಚಿಮ ತ್ರಿಪುರಾದಲ್ಲಿ (Tripura) ನಡೆದಿದೆ.
ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಹಾವೇರಿಯಲ್ಲಿ ನಿಲ್ದಾಣ ನಿರ್ಮಾಣವಾಗಿ 12 ವರ್ಷ ಕಳೆದರೂ ಇನ್ನೂ ಆರಂಭಗೊಂಡಿಲ್ಲ ನಗರ ಸಾರಿಗೆ!
ಮಹಿಳೆಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಜಿರಾನಿಯಾದ ಉಪವಿಭಾಗದ ಪೊಲೀಸ್ (Police) ಅಧಿಕಾರಿ ಕಮಲ್ ಕೃಷ್ಣ ಕೊಲೊಯ್ ತಿಳಿಸಿದ್ದಾರೆ.
ಹತ್ಯೆಗೀಡಾದ ಮಹಿಳೆಯ ಇಬ್ಬರು ಪುತ್ರರನ್ನು ಬಂಧಿಸಿದ್ದೇವೆ. ಆರೋಪಿಗಳನ್ನು ಇಂದು (ಸೋಮವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಸುಮಾರು ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲಾದಲ್ಲಿ ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಇಂದಿನಿಂದ ಸಿಎಂ ವಿರುದ್ಧ ಮುಡಾ ತನಿಖೆ ಆರಂಭ