622 ಪಾಸಿಟಿವ್, 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 428 ಮಂದಿಗೆ ಲಸಿಕೆ

Public TV
1 Min Read
corona 4

ಬೆಂಗಳೂರು: ಇಂದು ಕರ್ನಾಟಕದಲ್ಲಿ 622 ಮಂದಿಗೆ ಕೊರೊನಾ ಬಂದಿದ್ದು, ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಕಂಡು ಇಂದು 389 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಆಸ್ಪತ್ರೆಯಿಂದ 351 ಜನ ಡಿಸ್ಚಾರ್ಜ್ ಆಗಿದ್ದಾರೆ. 3 ಜನ ಕೊರೊನಾಗೆ ಬಲಿಯಾಗಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು 428 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.

ec5c5b34 48f0 4769 877a 69767fb9fba5

ಇಂದು ಬಾಗಲಕೋಟೆ, ಕೊಪ್ಪಳ, ರಾಮನಗರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,55,015 ಕ್ಕೆ ಏರಿಕೆ ಆಗಿದೆ. ಈ ಪೈಕಿ 9,35,772 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 6,862 ಸಕ್ರಿಯ ಪ್ರಕರಣಗಳಿವೆ.

36a92955 c543 44dd 850f 51248de0e5a2

ಒಟ್ಟು ಇಲ್ಲಿಯವರೆಗೆ 12,362 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 115 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 3,874 ಆಂಟಿಜನ್ ಟೆಸ್ಟ್, 72,086 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 75,960 ಮಂದಿಗೆ ಪರೀಕ್ಷೆ ಮಾಡಲಾಗಿದೆ.

f983b2fa 7df7 462d 8b2e 4d6ed9d10db7

ಇಂದು ಬೆಂಗಳೂರಿನಲ್ಲಿ 389 ಕೇಸ್ ವರದಿಯಾಗಿದೆ. ಕಲಬುರಗಿ 34 ಉಡುಪಿ 30, ತುಮಕೂರು 25, ಬೀದರ್ 24, ದಕ್ಷಿಣ ಕನ್ನಡದ 16 ಮಂದಿಗೆ ಸೋಂಕು ಬಂದಿದೆ. ಒಟ್ಟು 115 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 49, ಕಲಬುರಗಿ 10, ಮೈಸೂರು 5, ಬೆಳಗಾವಿ ಮತ್ತು ದಕ್ಷಿಣ ಕನ್ನಡದಲ್ಲಿ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *