ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 623 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 5,035ಕ್ಕೆ ಏರಿಕೆ ಕಂಡಿದೆ.
ಬೆಂಗಳೂರು ನಗರದಲ್ಲಿ ಇಂದು ಒಟ್ಟು 588 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,833ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 13 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 11 ಜಿಲ್ಲೆಗಳಲ್ಲಿ 35 ಕೇಸ್ ಮತ್ತು 18 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಏಕೈಕ ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,071 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 412 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,60,831 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,15,683 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 10,382 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 23,170 ಸ್ಯಾಂಪಲ್ (ಆರ್ಟಿಪಿಸಿಆರ್ 17,466 + 5,704 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
Advertisement
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 588, ದಕ್ಷಿಣಕನ್ನಡ 13, ಮೈಸೂರು 6, ಉಡುಪಿ ಮತ್ತು ಉತ್ತರಕನ್ನಡ ತಲಾ 4, ಬೆಂಗಳೂರು ಗ್ರಾಮಾಂತರ 2, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೋಲಾರ, ಮಂಡ್ಯದಲ್ಲಿ ತಲಾ ಒಂದೊಂದರಂತೆ ಸೇರಿ ಒಟ್ಟು 623 ಕೇಸ್ ವರದಿಯಾಗಿದೆ.