ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆಯಲ್ಲಿ ನಿಧಾನವಾಗಿ ಇಳಿಕೆಯಾಗುತ್ತಾ ಇದೆ. ಇಂದು 629 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹಾಗೆಯೇ 17 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇನ್ನು ಪಾಸಿಟಿವಿಟಿ ರೇಟ್ ಶೇ.0.67ಕ್ಕೆ ಇಳಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಇಂದು 229 ಕೇಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ 06 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಡೆತ್ ಕಂಟ್ರೋಲ್ ಗೆ ಬಂದಿದೆ. ಜೊತೆಗೆ ರಾಜ್ಯದಲ್ಲಿ ಇಂದು 782 ಜನ ಡಿಸ್ಚಾರ್ಜ್ ಆಗಿದ್ದು ಬೆಂಗಳೂರಿನಲ್ಲಿ 199 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಎಸ್.ಎಂ ಕೃಷ್ಣರಿಂದ ಈ ಬಾರಿ ದಸರಾ ಉದ್ಘಾಟನೆ: ಬೊಮ್ಮಾಯಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 16, ಬೆಂಗಳೂರು ನಗರ 229, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 17, ಚಿತ್ರದುರ್ಗ 5, ದಕ್ಷಿಣ ಕನ್ನಡ 96, ದಾವಣಗೆರೆ 1, ಧಾರವಾಡ 7, ಗದಗ 0, ಹಾಸನ 27, ಹಾವೇರಿ 2, ಕಲಬುರಗಿ 0, ಕೊಡಗು 30, ಕೋಲಾರ 5, ಕೊಪ್ಪಳ 0, ಮಂಡ್ಯ 22, ಮೈಸೂರು 58, ರಾಯಚೂರು 0, ರಾಮನಗರ 2, ಶಿವಮೊಗ್ಗ 14, ತುಮಕೂರು 22, ಉಡುಪಿ 39, ಉತ್ತರ ಕನ್ನಡ 16, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
ಇಂದಿನ 28/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/6gxFZj4fQx @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/EZYCXixMLK
— K'taka Health Dept (@DHFWKA) September 28, 2021