ಒಟ್ಟು 63 ಕೇಸ್ – 6 ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ

Public TV
1 Min Read
CORONA 12

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 63 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. 6 ಜಿಲ್ಲೆಗಳಲ್ಲಿ ತಲಾ ಒಂದೊಂದು ಮತ್ತು 23 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಇಂದು ಶೂನ್ಯ ಮರಣ ಪ್ರಕರಣ ದಾಖಲಾಗಿದೆ.

CORONA REPORT IN 7 04 2022.1

ಬೆಂಗಳೂರುನಗರದಲ್ಲಿ 57 ಪಾಸಿಟಿವ್ ಕೇಸ್ ಮತ್ತು ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಇಂದು 0.00% ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,056 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.56% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,427ಕ್ಕೆ ಇಳಿಕೆ ಕಂಡಿದೆ. ಒಟ್ಟು 51 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಎಕ್ಸಾಂಗೂ ಸಮವಸ್ತ್ರ ಕಡ್ಡಾಯ – ಹಿಜಬ್‍ಗಿಲ್ಲ ಅವಕಾಶ

CORONA REPORT IN 7 04 2022.2

ಈವರೆಗೆ ರಾಜ್ಯದಲ್ಲಿ ಒಟ್ಟು 39,45,823 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,298 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 80,300 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 11,170 ಸ್ಯಾಂಪಲ್ (ಆರ್‌ಟಿಪಿಸಿಆರ್ 7,702 + 3,468 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಆಟವಾಡ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿನಾಯಿಗಳು ದಾಳಿ; ಮುಂದೇನಾಯ್ತು ನೋಡಿ…

CORONA REPORT IN 7 04 2022

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 57, ಚಿತ್ರದುರ್ಗ, ದಕ್ಷಿಣಕನ್ನಡ, ದಾವಣಗೆರೆ, ಧಾರವಾಡ, ಮೈಸೂರು ಮತ್ತು ಉಡುಪಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *