ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 63 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. 6 ಜಿಲ್ಲೆಗಳಲ್ಲಿ ತಲಾ ಒಂದೊಂದು ಮತ್ತು 23 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಇಂದು ಶೂನ್ಯ ಮರಣ ಪ್ರಕರಣ ದಾಖಲಾಗಿದೆ.
Advertisement
ಬೆಂಗಳೂರುನಗರದಲ್ಲಿ 57 ಪಾಸಿಟಿವ್ ಕೇಸ್ ಮತ್ತು ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಇಂದು 0.00% ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,056 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.56% ಮತ್ತು ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,427ಕ್ಕೆ ಇಳಿಕೆ ಕಂಡಿದೆ. ಒಟ್ಟು 51 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಎಕ್ಸಾಂಗೂ ಸಮವಸ್ತ್ರ ಕಡ್ಡಾಯ – ಹಿಜಬ್ಗಿಲ್ಲ ಅವಕಾಶ
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,45,823 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,04,298 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 80,300 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 11,170 ಸ್ಯಾಂಪಲ್ (ಆರ್ಟಿಪಿಸಿಆರ್ 7,702 + 3,468 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಆಟವಾಡ್ತಿದ್ದ ಮಕ್ಕಳ ಮೇಲೆ 20ಕ್ಕೂ ಹೆಚ್ಚು ಬೀದಿನಾಯಿಗಳು ದಾಳಿ; ಮುಂದೇನಾಯ್ತು ನೋಡಿ…
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 57, ಚಿತ್ರದುರ್ಗ, ದಕ್ಷಿಣಕನ್ನಡ, ದಾವಣಗೆರೆ, ಧಾರವಾಡ, ಮೈಸೂರು ಮತ್ತು ಉಡುಪಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.