– ಅಂತರ್ಜಲ ವೃದ್ಧಿಗೆ ಆದ್ಯತೆ; ಚೆಕ್ ಡ್ಯಾಮ್ & ಏತ ನೀರಾವರಿ ಯೋಜನೆಗೆ ಒತ್ತು
– ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗಡುವು
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ (Farmers) ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು (NS Boseraju) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಕಾಸಸೌಧದ (Vikasa Soudha) ತಮ್ಮ ಕಚೇರಿಯಲ್ಲಿಂದು ನಡೆದ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಸ್‌ಸಿಪಿ (SCP) ಮತ್ತು ಟಿಎಸ್‌ಪಿ (TSP) ಅನುದಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ & ಸಂಶೋಧನಾ ಸಂಸ್ಥೆ ಆರಂಭಿಸಿ: ಕೇಂದ್ರಕ್ಕೆ ಎಂ.ಬಿ.ಪಾಟೀಲ್ ಪತ್ರ

6,322 ಕುಟುಂಬಗಳಿಗೆ ಲಾಭ:
2025–26ನೇ ಆರ್ಥಿಕ ಸಾಲಿನಲ್ಲಿ ಎಸ್‌ಸಿಪಿ–ಟಿಎಸ್‌ಪಿ (SCPTSP) ಅಡಿಯಲ್ಲಿ 3,939 ಪರಿಶಿಷ್ಟ ಜಾತಿ ಮತ್ತು 2,383 ಪರಿಶಿಷ್ಟ ಪಂಗಡದ ಕುಟುಂಬಗಳು ಸೇರಿದಂತೆ ಒಟ್ಟು 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನ ಶೀಘ್ರದಲ್ಲಿ ಮುಗಿಸಿ, ನಿಗದಿತ ಸಮಯದಲ್ಲಿ ರೈತರಿಗೆ ಸೌಲಭ್ಯ ತಲುಪಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು. ಇದನ್ನೂ ಓದಿ: ಹೊಸ ವರ್ಷಕ್ಕೂ ಮುನ್ನ ಭರ್ಜರಿ ಬೇಟೆ – 150 ಕೆಜಿ ಸ್ಫೋಟಕ, 200 ಬ್ಯಾಟರಿ, 1,100 ಮೀ ವೈರ್ ಸೀಜ್
ಜಲ ಸಂರಕ್ಷಣೆಗೆ ವಿಶೇಷ ಒತ್ತು:
ಅಂತರ್ಜಲ (Ground Water) ಮಟ್ಟ ವೃದ್ಧಿಸುವ ದೃಷ್ಟಿಯಿಂದಲೂ ಸರ್ಕಾರ ಹಲವಾರು ಯೋಜನೆಗಳನ್ನ ರೂಪಿಸಿದೆ. ಪರಿಶಿಷ್ಟ ಸಮುದಾಯಗಳ ಕೃಷಿ ಪ್ರದೇಶಗಳಲ್ಲಿ ಚೆಕ್ ಡ್ಯಾಮ್‌ಗಳ ನಿರ್ಮಾಣ ಮತ್ತು ಸಾಮೂಹಿಕ ಏತ ನೀರಾವರಿ ಯೋಜನೆಗಳಂತಹ ‘ಜಲ ಸಂರಕ್ಷಣಾ ರಚನೆ’ಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಕಳೆದ ವರ್ಷದ ಸಾಧನೆ:
2024–25ನೇ ಸಾಲಿನಲ್ಲಿ 365 ಕೋಟಿ ರೂ. ವೆಚ್ಚದಲ್ಲಿ ಒಟ್ಟು 5,371 ರೈತ ಕುಟುಂಬಗಳಿಗೆ (3,388 ಎಸ್‌ಸಿ ಮತ್ತು 1,983 ಎಸ್‌ಟಿ) ಯಶಸ್ವಿಯಾಗಿ ವಿದ್ಯುತ್ ಸಂಪರ್ಕಿತ ಕೊಳವೆಬಾವಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಕೆ ಪವಿತ್ರಾ ಹಾಗೂ ಉತ್ತರ ಮತ್ತು ದಕ್ಷಿಣ ವಲಯದ ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಚಿನ್ನ, ವಜ್ರ ತುಂಬಿದ ಸೂಟ್‌ಕೇಸ್, ಹಾಸಿಗೆ ಅಡಿ ಕಂತೆ ಕಂತೆ ಹಣ – ಇಡಿ ಯಿಂದ 14 ಕೋಟಿ ಜಪ್ತಿ

