ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 634 ಪಾಸಿಟಿವ್ ಕೇಸ್ ವರದಿಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,500ಕ್ಕೆ ಏರಿಕೆ ಕಂಡಿದೆ.
ಬೆಂಗಳೂರು ನಗರದಲ್ಲಿ ಇಂದು ಒಟ್ಟು 610 ಕೇಸ್ ಪತ್ತೆಯಾಗಿದ್ದು, 1 ಮರಣ ಪ್ರಕರಣ ಕೂಡ ವರದಿಯಾಗಿದೆ. ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,346ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 7 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 11 ಜಿಲ್ಲೆಗಳಲ್ಲಿ 24 ಕೇಸ್ ಮತ್ತು 19 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಬೆಂಗಳೂರು ನಗರದಲ್ಲಿ ಮತ್ತು ದಕ್ಷಿಣಕನ್ನಡದಲ್ಲಿ ತಲಾ ಒಂದರಂತೆ 2 ಮರಣ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,070 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 503 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಕೋವಿಡ್ ನಂತ್ರ ಸೋನಿಯಾ ಗಾಂಧಿ ಶ್ವಾಸಕೋಶದಲ್ಲಿ ಫಂಗಲ್ ಇನ್ಫೆಕ್ಷನ್
Advertisement
Advertisement
ಈವರೆಗೆ ರಾಜ್ಯದಲ್ಲಿ ಒಟ್ಟು 39,59,458 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,14,846 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 53,931 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 22,586 ಸ್ಯಾಂಪಲ್ (ಆರ್ಟಿಪಿಸಿಆರ್ 16,000 + 6,586 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: 4 ದಿನಗಳಿಂದ ನೂಪುರ್ ಶರ್ಮಾ ನಾಪತ್ತೆ – ಹುಡುಕಾಡಿ ಸುಸ್ತಾದ ಪೊಲೀಸರು
Advertisement
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 610, ದಕ್ಷಿಣಕನ್ನಡ 7, ಉಡುಪಿ ಮತ್ತು ಉತ್ತರಕನ್ನಡದಲ್ಲಿ ತಲಾ 3, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಮೈಸೂರಲ್ಲಿ ತಲಾ 2, ಬೆಳಗಾವಿ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಒಂದೊಂದು ಪ್ರಕರಣ ಸೇರಿ ಒಟ್ಟು 634 ಕೇಸ್ ವರದಿಯಾಗಿದೆ.