– ಪಾಸಿಟಿವಿಟಿ ರೇಟ್ 0.37% ಕ್ಕೆ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆ ಕಂಡು ಬಂದಿದೆ. ನಿನನೆ ರಾಜ್ಯದಲ್ಲಿ 589 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದರೆ ಇಂದು 636 ಮಂದಿಯಲ್ಲಿ ಪ್ರಕರಣ ಪತ್ತೆಯಾಗಿದೆ. ಇನ್ನು ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಇಂದು ಕೇವಲ 4 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಪಾಸಿಟಿವಿಟಿ ರೇಟ್ ಶೇ.0.37ಕ್ಕೆ ಇಳಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ ಇಂದು 245 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 745 ಮಂದಿ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನಲ್ಲಿ 206 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 245, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 20, ಚಿತ್ರದುರ್ಗ 4, ದಕ್ಷಿಣ ಕನ್ನಡ 100, ದಾವಣಗೆರೆ 2, ಧಾರವಾಡ 3, ಗದಗ 0, ಹಾಸನ 44, ಹಾವೇರಿ 1, ಕಲಬುರಗಿ 0, ಕೊಡಗು 28, ಕೋಲಾರ 7, ಕೊಪ್ಪಳ 3, ಮಂಡ್ಯ 13, ಮೈಸೂರು 44, ರಾಯಚೂರು 1, ರಾಮನಗರ 2, ಶಿವಮೊಗ್ಗ 22, ತುಮಕೂರು 30, ಉಡುಪಿ 25, ಉತ್ತರ ಕನ್ನಡ 14, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
ಇಂದಿನ 02/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/Bq4kzpmdAD @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/E0fEHVrRJK
— K'taka Health Dept (@DHFWKA) October 2, 2021