Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಯ್ಯಪ್ಪನಹಳ್ಳಿ NGEF ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂಬಿ ಪಾಟೀಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೈಯ್ಯಪ್ಪನಹಳ್ಳಿ NGEF ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂಬಿ ಪಾಟೀಲ್‌

Bengaluru City

ಬೈಯ್ಯಪ್ಪನಹಳ್ಳಿ NGEF ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂಬಿ ಪಾಟೀಲ್‌

Public TV
Last updated: January 3, 2026 6:15 pm
Public TV
Share
3 Min Read
65 acres of arboretum at Baiyyappanahalli NGEF land MB Patil 2
SHARE

ಬೆಂಗಳೂರು: ಬೈಯ್ಯಪ್ಪನಹಳ್ಳಿಯಲ್ಲಿದ್ದ (Baiyyappanahalli) ಸರಕಾರಿ ಸ್ವಾಮ್ಯದ ನ್ಯೂ ಗವರ್ನಮೆಂಟ್‌ ಎಲೆಕ್ಟ್ರಿಕಲ್‌ ಫ್ಯಾಕ್ಟರಿಗೆ (NGEF) ಸೇರಿದ 119 ಎಕರೆ ಜಾಗದ ಪೈಕಿ 65 ಎಕರೆ ಜಾಗದಲ್ಲಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಲಾಗುವುದು. ಮಾರ್ಚ್ ತಿಂಗಳಲ್ಲಿ ಮೊದಲ ಹಂತವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ (MB Patil) ತಿಳಿಸಿದ್ದಾರೆ.

ಎಂಬಿ ಪಾಟೀಲ್‌ ಶನಿವಾರ ಎನ್‌ಜಿಎಫ್‌ ಆವರಣಕ್ಕೆ ಭೇಟಿ ನೀಡಿ ವೃಕ್ಷೋದ್ಯಾನ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಜೊತೆಯಲ್ಲಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವೃಕ್ಷೋದ್ಯಾನವನ್ನು ಹಂತ 1, 1ಎ, 1ಬಿ ಮತ್ತು 2 ಹೀಗೆ ನಾಲ್ಕು ಹಂತಗಳಲ್ಲಿ 37.75 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. 1ಎ ಹಂತದ ಕಾಮಗಾರಿ ಕೂಡ ಮುಂದಿನ 6 ತಿಂಗಳಲ್ಲಿ ಮುಗಿಯಲಿದೆ. ಒಟ್ಟಾರೆ ಈ ಜಾಗದಲ್ಲಿ ಈಗಾಗಲೇ 8,500 ಬಗೆಬಗೆಯ ಮರಗಳಿವೆ. ಇವುಗಳ ವೈಜ್ಞಾನಿಕ ಹೆಸರನ್ನು ಈಗ ಪ್ರದರ್ಶಿಸಲಾಗಿದೆ. ಇವುಗಳ ಪೈಕಿ ಒಂದೇ ಒಂದು ಮರವನ್ನೂ ನಾವು ಕಡಿಯುವುದಿಲ್ಲ. ಆದರೆ ಇಲ್ಲಿರುವ ನೀಲಗಿರಿ ಜಾತಿಯ ಮರಗಳನ್ನು ಏನು ಮಾಡಬೇಕೆಂದು ವೈಜ್ಞಾನಿಕವಾಗಿ ಪರಿಶೀಲಿಸಿ ತೀರ್ಮಾನಿಸಲಾಗುವುದು. ಹಂತ-1ರ ಕಾಮಗಾರಿಗಳಿಗೆ ಅಗತ್ಯವಿದ್ದ 11.50 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.

ಎನ್‌ಜಿಇಎಫ್ ಆವರಣದಲ್ಲಿರುವ ಆಡಳಿತ ಕಚೇರಿ ಕಟ್ಟಡಗಳು, ಕೈಗಾರಿಕಾ ಶೆಡ್ ಗಳು ಕೂಡ ಸುಭದ್ರವಾಗಿವೆ. ಇವೆಲ್ಲವೂ ಗಟ್ಟಿಮುಟ್ಟಾಗಿವೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಪರೀಕ್ಷಿಸಿ ಹೇಳಿದ್ದಾರೆ. ಆದ್ದರಿಂದ ಈ ಕಟ್ಟಡಗಳಿಗೇ ಹೊಸ ರೂಪ ಕೊಟ್ಟು ಅಗತ್ಯಗಳನ್ನು ಪೂರೈಸಿಕೊಳ್ಳಲಾಗುವುದು. ಕಾಂಪೌಂಡಿನ ಹೊರಗೂ ಕಾರ್ಖಾನೆಗೆ ಸೇರಿದ 4.5 ಎಕರೆ ಜಾಗವಿದೆ. ಅಲ್ಲಿ 5 ರಿಂದ 7 ಸಾವಿರ ವಾಹನಗಳ ನಿಲುಗಡೆಗೆ ಬಹುಮಹಡಿ ಪಾರ್ಕಿಂಗ್ ಲಾಟ್ ನಿರ್ಮಿಸಲಾಗುವುದು ಎಂದರು.

65 acres of arboretum at Baiyyappanahalli NGEF land MB Patil 1

ಈಗಾಗಲೇ ಇರುವ ಎರಡು ಎಲೆಕ್ಟ್ರಿಕ್ ಮೋಟಾರ್ ಶೆಡ್‌ಗಳಲ್ಲಿ ಕನಿಷ್ಠ 15 ಸಾವಿರ ಆಸನ ವ್ಯವಸ್ಥೆ ಇರುವ ಎರಡು ಪ್ರತ್ಯೇಕ ಕನ್ವೆನ್ಶನ್ ಸೆಂಟರ್ ನಿರ್ಮಿಸಲಾಗುವುದು. ಇಲ್ಲಿ ಸಮಾವೇಶ, ಸಮಾರಂಭ, ವಾರ್ಷಿಕೋತ್ಸವ, ಸಮ್ಮೇಳನ, ವಿಚಾರ ಸಂಕಿರಣ, ಕಾರ್ಯಕ್ರಮ ಇತ್ಯಾದಿಗಳನ್ನು ಮಾಡಬಹುದು. ಇದರ ಜೊತೆಗೆ `ಇನ್ನೋವರ್ಸ್’ ಹೆಸರಿನಲ್ಲಿ ನವೋದ್ಯಮಗಳಿಗೆ ಬೇಕಾದ ಪರಿಪೋಷಣಾ ಕೇಂದ್ರವನ್ನು ಸರ್ಕಾರದ `ಕಿಟ್ಸ್’ ಸಂಸ್ಥೆಯ ವತಿಯಿಂದ ಸ್ಥಾಪಿಸಲಾಗುವುದು. ಇಲ್ಲಿ ನವೋದ್ಯಮ ವಲಯದವರು ಬಂದು ಕೆಲಸವನ್ನೂ ಮಾಡಬಹುದು. ಜೊತೆಗೆ ಐಟಿ-ಬಿಟಿ ಇಲಾಖೆಯು ಇಲ್ಲಿ 100 ಕೋಟಿ ರೂ. ವೆಚ್ಚದಲ್ಲಿ `ಟೆಕ್ನಾಲಜಿ ಇನ್ನೋವೇಶನ್ ಮ್ಯೂಸಿಯಂ’ಅನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ವಿವರಿಸಿದರು.

ವೃಕ್ಷೋದ್ಯಾನದಲ್ಲಿ ಜಾಗತಿಕ ಮಟ್ಟದ ಶಿಲ್ಪಕಲೋದ್ಯಾನ, ಎನ್ ಜಿಇಎಫ್ ವಸ್ತು ಸಂಗ್ರಹಾಲಯ ಕೂಡ ಇರಲಿವೆ. ಈ ಆವರಣದಲ್ಲಿ ಯಾವುದೇ ರೀತಿಯ ಮಾಲ್ ನಿರ್ಮಿಸುವುದಿಲ್ಲ. ಜೊತೆಗೆ ವೈವಿಧ್ಯಮಯ ಚಟುವಟಿಕೆಗಳನ್ನು ನಡೆಸಲು ಸುಸಜ್ಜಿತ ಆ್ಯಂಪಿ ಥಿಯೇಟರ್ ಕಟ್ಟಲಾಗುವುದು. ಇದರಿಂದ ನಗರದ ಪೂರ್ವ ಭಾಗದ ಜನರಿಗೆ ಅನುಕೂಲವಾಗಲಿದೆ. ಇದು ಕಬ್ಬನ್ ಪಾರ್ಕ್ ಮತ್ತು ಲಾಲ್‌ಬಾಗ್ ಗಿಂತ ಒಳ್ಳೆಯ ಹಸಿರು ತಾಣವಾಗಲಿದೆ. ಇಲ್ಲಿ ಪ್ರವೇಶ ದ್ವಾರಕ್ಕೆ ಬೇಕಾದ ಸ್ವಲ್ಪ ಜಾಗ ಮಾತ್ರ ನಮ್ಮ ಮೆಟ್ರೋ ಅಧೀನದಲ್ಲಿದೆ. ಈ ಸಂಬಂಧವಾಗಿ ಅವರೊಂದಿಗೆ ಮಾತನಾಡಿ ಜಾಗವನ್ನು ಪಡೆದುಕೊಳ್ಳಲಾಗುವುದು ಎಂದು ಎಂಬಿಪಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ 250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್‌ ಒಪ್ಪಿಗೆ

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಡಾ.ಜೆ. ರವಿಶಂಕರ್, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ , ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ವಿಶಾಲ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಜತೆಯಲ್ಲಿದ್ದರು.

ಏನೇನು ಇರುತ್ತೆ?
ಎನ್ ಜಿಇಎಫ್ ವೃಕ್ಷೋದ್ಯಾನವು ಹಂತ-1 ಪ್ರವೇಶ ದ್ವಾರದ ಪ್ಲಾಜಾ, ಎಲಿವೇಟೆಡ್ ವಾಕ್-ವೇ, ಸೈಕ್ಲಿಂಗ್ ಪಥ, ನೀರಿನ ಝರಿ/ಚಿಲುಮೆ/ಕಾರಂಜಿ, ಫುಡ್ ಕೋರ್ಟ್, ಮಕ್ಕಳು ಆಟವಾಡುವ ಜಾಗ, ಸಾಕುಪ್ರಾಣಿಗಳನ್ನು ಕರೆದುಕೊಂಡು ಬರುವ ಜಾಗ, ಶೌಚಾಲಯಗಳು ಮತ್ತು ಇನ್ನಿತರ ಮೂಲಸೌಕರ್ಯಗಳು ಇರಲಿದೆ.

ಎಲಿವೇಟೆಡ್-ವಾಕ್ ವೇಸ್, ವೀಕ್ಷಣಾ ಗೋಪುರ, ಮುಂಚಿನಿಂದಲೂ ಇರುವ ಆಡಳಿತ ವಿಭಾಗದ ನವೀಕರಣ, ಓಪನ್ ಆ್ಯಂಫಿ-ಥಿಯೇಟರ್ ಇವುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಫೇಸ್-2ರಲ್ಲಿ ಎನ್ ಜಿಇಎಫ್ ಫ್ಯಾಕ್ಟರಿ ಇದ್ದಾಗ ಕಟ್ಟಿದ್ದ ಶೆಡ್ ಗಳನ್ನು ಸ್ಪೋರ್ಟ್ ಹಬ್, ಕಲೆ ಮತ್ತು ಸಂಸ್ಕೃತಿಗಳ ಕೇಂದ್ರ, ಸಮುದಾಯ ಭವನ ಮತ್ತು ಫುಡ್ ಕೋರ್ಟ್ ಇಷ್ಟನ್ನೂ ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ.

TAGGED:BaiyyappanahallibengaluruMB PatilNGEFParkಎಂಬಿ ಪಾಟೀಲ್ಬೆಂಗಳೂರುಬೈಯಪ್ಪನಹಳ್ಳಿವೃಕ್ಷೋದ್ಯಾನ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

russian s400 missilere
Latest

ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

Public TV
By Public TV
52 seconds ago
Anekal Car Accident
Bengaluru City

ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ – ಮರಕ್ಕೆ ಡಿಕ್ಕಿಯಾಗಿ ಓರ್ವ ದುರ್ಮರಣ

Public TV
By Public TV
12 minutes ago
Thawar Chand Gehlot 2
Bengaluru City

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Public TV
By Public TV
12 minutes ago
Republic Day Narendra Modi
Latest

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

Public TV
By Public TV
1 hour ago
Tumkur Accident
Crime

ತುಮಕೂರಿನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ದುರ್ಮರಣ

Public TV
By Public TV
1 hour ago
Parappana Agrahara
Bengaluru City

ಅಲೋಕ್‌ ಕುಮಾರ್ ಸ್ಟ್ರಿಕ್ಟ್ ಆಕ್ಷನ್‌ – ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಹಲವು ಕ್ರಮ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?