ನವದೆಹಲಿ: ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ 65,000 ಕೋಟಿ ರೂ. ಮೀಸಲಿಡಬೇಕು ಎಂದು ಖ್ಯಾತ ಅರ್ಥಶಾಸ್ತ್ರಜ್ಞ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು ಆರ್ಥಿಕ ಪರಿಸ್ಥಿತಿ ಸುಧಾರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಕೊರೊನಾದಿಂದ ಭಾರತದ ಆರ್ಥಿಕತೆ ಪೆಟ್ಟು ತಿಂದಿದೆ. ಆರ್ಥಿಕತೆಯ ಪುನರಾರಂಭಿಸಬೇಕಾದ ಅನಿವಾರ್ಯತೆ ಇದೆ. ಕೆಲವೊಮ್ಮೆ ಇಂಥ ಘಟನೆಗಳಿಂದ ಆರ್ಥಿಕತೆ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಕೂಡ ಇದ್ದು, ಪರಿಸ್ಥಿತಿಯ ಲಾಭ ಪಡೆಯುವ ಹಲವು ಮಾರ್ಗಗಳಿದ್ದು ಅವುಗಳನ್ನು ಸರ್ಕಾರ ಬಳಸಿಕೊಳ್ಳಬೇಕಿದೆ ಎಂದು ರಾಜನ್ ಹೇಳಿದ್ದಾರೆ.
Advertisement
Advertisement
ಜಾಗತಿಕ ಆರ್ಥಿಕತೆ ಬಗ್ಗೆ ಪುನರ್ವಿಮರ್ಶೆ ಮಾಡಬೇಕು ಭಾರತದಲ್ಲಿ ಸಾಕಷ್ಟು ಸಂಪನ್ಮೂಲಗಳಿದೆ ನಮ್ಮ ಸೀಮಿತ ಸಾಮರ್ಥ್ಯಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಆರ್ಥಿಕತೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದೇಗೆ ಎಂದು ನಿರ್ಧರಿಸಬೇಕು. ಲಾಕ್‍ಡೌನ್ ಮುಗಿದ ಬಳಿಕ ಸಮಸ್ಯೆ ಹೆಚ್ಚಾಗುತ್ತದೆ. ಆ ಸಮಯದಲ್ಲಿ ದೇಶದ ಪರಿಸ್ಥಿತಿ ಇನ್ನಷ್ಟು ದುರ್ಬಲಗೊಳ್ಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Advertisement
A conversation with Dr Raghuram Rajan, former RBI Governor, on dealing with the #Covid19 crisis. https://t.co/cdJtJ7ax0T
— Rahul Gandhi (@RahulGandhi) April 30, 2020
Advertisement
ಕೊರೊನಾ ಪರಿಸ್ಥಿತಿಯನ್ನು ಬೇರೆ ರೀತಿಯಲ್ಲಿ ನಿರ್ವಹಿಸಬೇಕು ಸಾಮೂಹಿಕ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು. ಜೊತೆಗೆ ಜನರಿಗೆ ಜೀವನೋಪಾಯ ತೆರೆಯುವ ಬಗ್ಗೆ ಸರ್ಕಾರ ಚಿಂತಿಸಬೇಕು ಜನರನ್ನು ಸಾಯಲು ಬಿಡಬಾರದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಸಂದರ್ಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ ದಕ್ಷಿಣ ಭಾರತದ ರಾಜ್ಯಗಳ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಕೊರೊನಾ ಪರಿಸ್ಥಿತಿ ನಿಯಂತ್ರಣ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಕೆಲಸ ಮಾಡುತ್ತಿವೆ. ದಕ್ಷಿಣ ರಾಜ್ಯಗಳಲ್ಲಿ ವಿಕೇಂದ್ರೀಕರಣ ಪದ್ಧತಿ ಇದೆ ಜನರಿಗೆ ಏನು ಮಾಡಬೇಕೆಂದು ಯೋಚಿಸುವ ಶಕ್ತಿ ಇದೆ ಎಂದು ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದರು.