ಉದ್ಧವ್‌ಗೆ ಮತ್ತೆ ಶಾಕ್ – ಶಿವಸೇನೆಯ 64 ಪಾಲಿಕೆ ಸದಸ್ಯರು ಶಿಂಧೆ ಬಣಕ್ಕೆ ಸೇರ್ಪಡೆ

Advertisements

ಮುಂಬೈ: ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳು ತಿರುವುಪಡೆದುಕೊಳ್ಳುತ್ತಿದ್ದು, ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.

Advertisements

ಥಾಣೆ ಜಿಲ್ಲೆಯಲ್ಲಿ ಶಿವಸೇನೆಯ 66 ಮಂದಿ ನಗರಪಾಲಿಕೆ ಸದಸ್ಯರು ಏಕನಾಥ್ ಶಿಂಧೆ ಪಾಳೆಯಕ್ಕೆ ಸೇರ್ಪಡೆಗೊಂಡಿದ್ದು ಉದ್ಧವ್ ಠಾಕ್ರೆಗೆ ಭಾರಿ ಹಿನ್ನಡೆಯಾಗಿದೆ. ಇದನ್ನೂ ಓದಿ: ಅಭಿವೃದ್ಧಿ ಮತ್ತು ಹಿಂದುತ್ವಕ್ಕಾಗಿ ಬಿಜೆಪಿ ನಮ್ಮನ್ನು ಬೆಂಬಲಿಸಿದೆ – ಏಕನಾಥ್‌ ಶಿಂಧೆ

Advertisements

ಸದ್ಯ ಶಿವಸೇನೆಯು ಪ್ರಸ್ತುತ ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಎರಡು ಬಣಗಳಾಗಿ ವಿಭಜಿಸಲ್ಪಟ್ಟಿದೆ. ನೂತನ ಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂಧೆ, ಈಚೆಗಷ್ಟೇ ಶಿವಸೇನೆಯಿಂದ ಬಂಡಾಯವೆದ್ದು ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ. ಇದನ್ನೂ ಓದಿ: ಐಸಿಯುವಿನಲ್ಲಿ ಲಾಲು ಪ್ರಸಾದ್ ಯಾದವ್‍ಗೆ ಚಿಕಿತ್ಸೆ – ಆರೋಗ್ಯ ವಿಚಾರಿಸಿದ ಮೋದಿ

ಶಿವಸೇನೆಯಿಂದ ಬಂಡಾಯವೆದ್ದಾಗ ಅವರನ್ನು ಉಪಮುಖ್ಯಮಂತ್ರಿ ಮಾಡಬಹುದೆಂಬ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಸ್ಥಾನ ಸಿಗುವಂತೆ ಮಾಡಿ ಹಲವರನ್ನು ಅಚ್ಚರಿಗೊಳಿಸಿದೆ. ಇದೀಗ ಉದ್ಧವ್ ಠಾಕ್ರೆಯ ಬಣವನ್ನು ಇನ್ನಷ್ಟು ದುರ್ಬಲಗೊಳಿಸಲು ಬಿಜೆಪಿ ಗೇಮ್‌ಪ್ಲಾನ್ ಮಾಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisements

Live Tv

Advertisements
Exit mobile version