ಬೆಂಗಳೂರು: ರಾಜ್ಯದಲ್ಲಿ ಇಂದು 664 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 8 ಮಂದಿ ಸಾವನ್ನಪ್ಪಿದರೆ, 711 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 12,301 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,77,889 ಮಂದಿಗೆ ಕೊರೊನಾ ಬಂದಿದೆ. 29,27,740 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.52ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.20ರಷ್ಟಿದೆ. ಇದನ್ನೂ ಓದಿ: ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್
ಇಂದು ರಾಜ್ಯದಲ್ಲಿ ಒಟ್ಟು 21,971 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,26,386 ಸ್ಯಾಂಪಲ್ (ಆರ್ಟಿ ಪಿಸಿಆರ್ 1,05,380 + 21,006 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 196 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 3 ಜನ ಮರಣ ಹೊಂದಿದ್ದಾರೆ. 258 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾದರೆ, ಹಾವೇರಿ, ರಾಮನಗರ ಮತ್ತು ವಿಜಯಪುರದಲ್ಲಿ ಕೇವಲ 1 ಪ್ರಕರಣಗಳು ದಾಖಲಾಗಿದೆ. ಉಳಿದಂತೆ, ಬಳ್ಳಾರಿ 3, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 196, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 13, ಚಿತ್ರದುರ್ಗ 12, ದಕ್ಷಿಣ ಕನ್ನಡ 76, ದಾವಣಗೆರೆ 4, ಧಾರವಾಡ 9, ಹಾಸನ 45, ಕೊಡಗು 52, ಕೋಲಾರ 13, ಕೊಪ್ಪಳ 2, ಮಂಡ್ಯ 8, ಮೈಸೂರು 101, ಶಿವಮೊಗ್ಗ 11, ತುಮಕೂರು 18, ಉಡುಪಿ 33, ಉತ್ತರ ಕನ್ನಡ 43 ಮತ್ತು ಯಾದಗಿರಿಯಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.