– ಬಾಂಬೆ ಹೈಕೋರ್ಟ್‌ಗೆ ಮಹಾರಾಷ್ಟ್ರ ಸರ್ಕಾರದ ಮಾಹಿತಿ
ಮುಂಬೈ: ಇಸ್ಲಾಂ ಧರ್ಮ ಮತ್ತು ಪ್ರವಾದಿ ಮೊಹಮ್ಮದ್‌ರ (Prophet Mohammed) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ ರಾಜ್ಯಾದ್ಯಂತ ಸುಮಾರು 67 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್‌ಗೆ (Bombay High Court) ಹೇಳಿದೆ.
ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ (Mahant Ramgiri Maharaj) ಅವರು ನೀಡಿದ ಅವಹೇಳಕಾರಿ ಹೇಳಿಕೆಗಳನ್ನು ಎಲ್ಲ ಸೋಶಿಯಲ್ ಮೀಡಿಯಾದಿಂದ ಸೈಬರ್ ಕ್ರೈಂ ಪೊಲೀಸರು (Cyber Crime Police) ತೆಗೆದುಹಾಕುತ್ತಿದ್ದಾರೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಇದನ್ನೂ ಓದಿ: 14 ಸೈಟ್ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು
Advertisement
Advertisement
ಮಹಾರಾಜರೊಂದಿಗೆ ವೇದಿಕೆ ಹಂಚಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಎಫ್‌ಐಆರ್‌ಗಳು ದಾಖಲಾದ ಹಿನ್ನಲೆ, ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಮಹಾರಾಷ್ಟ್ರ ಅಡ್ವೊಕೇಟ್ ಜನರಲ್ ಡಾ.ಬೀರೇಂದ್ರ ಸರಾಫ್ ಅವರು ಕೋರ್ಟ್‌ಗೆ ಈ ವಿಷಯ ತಿಳಿಸಿದರು.
Advertisement
ವಕೀಲ ಮೊಹಮ್ಮದ್ ವಾಸಿ ಸಯೀದ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದು, 2014 ರಿಂದ ಕೋಮು ಘಟನೆಗಳು ತೀವ್ರವಾಗಿ ಏರಿಕೆಯಾಗುತ್ತಿವೆ ಮತ್ತು ಮುಸ್ಲಿಮರ ಬಹಿಷ್ಕಾರ ಮತ್ತು ವ್ಯವಸ್ಥಿತ ಇಸ್ಲಾಮೋಫೋಬಿಕ್ ಪದ್ಧತಿಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಕ್ಷಿಸುತ್ತವೆ ಮತ್ತು ಸಂರಕ್ಷಿಸುತ್ತಿವೆ, ಇದರಿಂದಾಗಿ ಗುಂಪು-ಗುಂಪು ಹತ್ಯೆಗಳು, ಗಲಭೆಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್
Advertisement
ಈ ಬಗ್ಗೆ ವಾದ ಮಂಡಿಸಿದ ವಕೀಲ ಎಜಾಜ್ ನಖ್ವಿ, ರಾಮಗಿರಿ ಮಹಾರಾಜರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವ ಬದಲು ಸಿಎಂ ಏಕನಾಥ್ ಶಿಂಧೆ ಮಹಂತ್ ರಾಮಗಿರಿ ಮಹಾರಾಜ್ ಅವರೊಂದಿಗೆ ವೇದಿಕೆ ಹಂಚಿಕೊಂಡು ರಾಜ್ಯದಲ್ಲಿ ಸಂತರಿಗೆ ರಕ್ಷಣೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅವಹೇನಕಾರಿ ಹೇಳಿಕೆ ನೀಡಲು ಪ್ರಚೋದನೆ ನೀಡದಂತಾಗಲಿದೆ ಹೀಗಾಗೀ ಅವರು ವಿರುದ್ಧವೂ ದೂರು ದಾಖಲಿಸಬೇಕು ಎಂದರು.
ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು, ನಾವು ಭಾಷಣ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ, ಆದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಮತ್ತು ಅವರು ಸಾಧ್ಯವಿರುವ ಕಡೆ ಎಫ್‌ಐಆರ್‌ಗಳನ್ನು ದಾಖಲಿಸುತ್ತಿದ್ದಾರೆ ಎಂದು ಹೇಳಿತು. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ
ಅಲ್ಲದೇ ಸಿಎಂ ಸ್ವಾಮಿಜಿ ಜೊತೆಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ ಎಂಬ ಕಾರಣಕ್ಕೆ ಎಫ್‌ಐಆರ್ ದಾಖಲಿಸಲು ಸಾಧ್ಯವಿಲ್ಲ. ಅವರು ಕಾನೂನು ಉಲ್ಲಂಘಿಸಿರುವ ಬಗ್ಗೆ ಸಾಕ್ಷ್ಯಗಳನ್ನು ನೀಡಿದರೆ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ. ವೀಡಿಯೊಗಳನ್ನು ತೆಗೆದುಹಾಕುವುದು ನಿಮ್ಮ ಮುಖ್ಯ ವಿಷಯ ಅಲ್ಲವೇ ಎಂದು ಕೋರ್ಟ್ ಪ್ರಶ್ನಿಸಿತು. ಈ ವೇಳೆ ಸಿಎಂ ಪರ ವಕೀಲರು ಸಿಎಂ ಹೆಸರು ಪ್ರಕರಣದಿಂದ ಕೈಬಿಡಬೇಕು ಎಂದರು. ಕೋರ್ಟ್ ಅಕ್ಟೊಬರ್ 17 ಕ್ಕೆ ವಿಚಾರಣೆ ಮುಂದೂಡಿದೆ.