ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿನ್ನೆಯಂತೆ ಇಂದು ಕೂಡ ಅಲ್ಪಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದು 677 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 24 ಮಂದಿ ಸಾವನ್ನಪ್ಪಿದ್ದು, 1,678 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 8 ಜಿಲ್ಲೆಗಳಲ್ಲಿ ಇಂದು ಶೂನ್ಯ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಒಟ್ಟು 14,358 ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಇದು ಕೂಡ ನಿನ್ನೆಗಿಂತ ಇಂದು ಇಳಿಕೆ ಕಂಡಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,68,543 ಮಂದಿಗೆ ಕೊರೊನಾ ಬಂದಿದೆ. 29,16,530 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.60ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.3.54ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ಹನಿಟ್ರ್ಯಾಪ್ಗೆ ಬಲೆಗೆ ಬಿದ್ದು ಪಾಕಿಗೆ ಸೇನಾ ಮಾಹಿತಿ ರವಾನೆ
ಇಂದು ರಾಜ್ಯದಲ್ಲಿ ಒಟ್ಟು 2,55,503 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,12,160 ಸ್ಯಾಂಪಲ್ (ಆರ್ಟಿ ಪಿಸಿಆರ್ 94,001 + 18,159 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 213 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಮರಣ ಹೊಂದಿದ್ದಾರೆ. 362 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ ಏರಿಕೆ ಕಾಣುತ್ತಿದೆ. ಇದನ್ನೂ ಓದಿ: ಪ್ರಚಾರದ ಹುಚ್ಚಿಗೆ ಬಿದ್ದು ಯಡವಟ್ಟು ಮಾಡಿಕೊಂಡ್ವಿ -ಪೊಲೀಸರ ಮುಂದೆ ಕಣ್ಣೀರಿಟ್ಟ ಯುವಕರು
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಳ್ಳಾರಿ 3, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 213, ಬೀದರ್ 1, ಚಾಮರಾಜನಗರ 5, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 102, ದಾವಣಗೆರೆ 3, ಧಾರವಾಡ 5, ಗದಗ 2, ಹಾಸನ 37, ಕಲಬುರಗಿ 3, ಕೊಡಗು 29, ಕೋಲಾರ 23, ಮಂಡ್ಯ 5, ಮೈಸೂರು 37, ಶಿವಮೊಗ್ಗ 7, ತುಮಕೂರು 26, ಉಡುಪಿ 63, ಉತ್ತರ ಕನ್ನಡದಲ್ಲಿ 41 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.