– 2700ಕ್ಕೂ ಹೆಚ್ಚು ಮಂದಿ ಅಸ್ವಸ್ಥ – ಸಾವು ಸಂಭವಿಸಲು ಕಾರಣವೇನು?
ಜೆರುಸಲೇಂ: ಇಸ್ಲಾಂ ಧರ್ಮದ ಪವಿತ್ರ ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ (Mecca) ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಭಾರೀ ಪ್ರಮಾಣದ ಸಾವು-ನೋವಾಗಿದೆ. ಮೃತಪಟ್ಟವರ ಸಂಖ್ಯೆ 645ಕ್ಕೆ ಏರಿಕೆಯಾಗಿದ್ದು, ಈ ಪೈಕಿ 68 ಮಂದಿ ಭಾರತೀಯರೂ ಇದ್ದಾರೆ ಎಂದು ಅರಬ್ ರಾಜತಾಂತ್ರಿಕರು ತಿಳಿಸಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ (Hajj Pilgrims) ತೆರಳಿದ್ದರು.
Advertisement
ಮರಣ ಸಂಖ್ಯೆ ಹೆಚ್ಚಿದ್ದು ಏಕೆ?
ಪ್ರತಿ ವರ್ಷದಂತೆ ಈ ವರ್ಷವೂ ಲಕ್ಷಾಂತರ ಮಂದಿ ಯಾತ್ರಿಕರು ಹಜ್ ಯಾತ್ರೆ ಹಮ್ಮಿಕೊಂಡಿದ್ದರು. ವಿವಿಧ ದೇಶಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಬಂದಿದ್ದರು. ಈ ವೇಳೆ ಮಿತಿಮೀರಿದ ತಾಪಮಾನ ಏರಿಕೆಯಿಂದ 645 ಮಂದಿ ಯಾತ್ರಿಕರು ಮೃತಪಟ್ಟಿದ್ದು, 2700ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ನೋಂದಣಿ ಮಾಡಿಕೊಳ್ಳದೇ ಹಜ್ ಯಾತ್ರೆಗೆ ಬರುವವರಿಗೆ ಸೂಕ್ತ ಎಸಿ ಸೌಲಭ್ಯ ಇರುವುದಿಲ್ಲ, ಸೂರು ಸಿಗುವುದಿಲ್ಲ. ಈ ಕಾರಣದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಮೆಕ್ಕಾದ ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. 2023ರ ಹಜ್ ಯಾತ್ರೆ ಸಂದರ್ಭದಲ್ಲಿ ವಿವಿಧ ದೇಶಗಳ ಕನಿಷ್ಠ 240 ಯಾತ್ರಿಕರು ಸಾವನ್ನಪ್ಪಿದ್ದರು ಎಂದು ಅರಬ್ ರಾಜತಾಂತ್ರಿಕರು ತಿಳಿಸಿದ್ದಾರೆ
Advertisement
ಏನಿದು ಹಜ್ ಯಾತ್ರೆ?
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ ಒಂಬತ್ತರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ.