ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ (Honey Trap) ಕಹಾನಿಗಳು ಒಂದೊಂದಾಗಿಯೇ ಬಯಲಾಗುತ್ತಿದ್ದು, ಇದೀಗ 68ರ ವೃದ್ಧನಿಗೆ 25ರ ಚೆಲುವೆ ಹನಿಟ್ರ್ಯಾಪ್ ಮಾಡಿದ್ದು, 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಬೆಳಕಿಗೆ ಬಂದಿದೆ.
ಇಬ್ಬರು ಯುವಕರಿಂದ 25ರ ಯುವತಿ 2 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿಸಿದ್ದಾಳೆ. 2 ಕೋಟಿ ರೂ. ನೀಡದಿದ್ದರೇ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಜಯ್, ಅಭಿ ಎಂಬುವವರ ವಿರುದ್ಧ 68ರ ವೃದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ (Koramangala Police Station) ದೂರು ದಾಖಲಿಸಿದ್ದಾರೆ.ಇದನ್ನೂ ಓದಿ:ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಚಲುವರಾಯಸ್ವಾಮಿ ಪುತ್ರ ಮಂಡ್ಯ ಲೋಕಲ್ ಪಾಲಿಟಿಕ್ಸ್‌ಗೆ ಎಂಟ್ರಿ!
ಕೋರಮಂಗಲದ ಕಾಫಿ ಬಾರ್ ಒಂದರಲ್ಲಿ ಖಾಸಗಿ ವಿಡಿಯೋಗಳನ್ನು ತೋರಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಖಾಸಗಿ ವಿಡಿಯೋಗಳನ್ನು ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ಆರೋಪಿಗಳಿಬ್ಬರು 2 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿ, 40 ಲಕ್ಷಕ್ಕೆ ಡೀಲ್ ಕುದುರಿಸಿದ್ದರು. 2-3 ದಿನಗಳ ಒಳಗೆ ಹಣ ನೀಡದಿದ್ದರೇ ವಿಡಿಯೋ ಹರಿಬಿಡುವುದಾಗಿ ಹೆದರಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಸದ್ಯ ಈ ಕುರಿತು ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖಾಸಗಿ ವಿಡಿಯೋಗಳನ್ನು ಎಡಿಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.ಇದನ್ನೂ ಓದಿ:ದಾದಾಸಾಹೇಬ್ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಬಾಲಿವುಡ್ ನಟ ಮನೋಜ್ ಕುಮಾರ್ ನಿಧನ