ನವದೆಹಲಿ: ದೆಹಲಿ ಕರ್ನಾಟಕ ಭವನದಲ್ಲಿ (Karnataka Bhavan) (ಶರಾವತಿ) ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಿಸಲಾಯಿತು. ಕರ್ನಾಟಕ ಸರ್ಕಾರದ ನವದೆಹಲಿಯ (New Delhi) ವಿಶೇಷ ಪ್ರತಿನಿಧಿಗಳಾದ ಪ್ರಕಾಶ್ ಹುಕ್ಕೇರಿ (Prakash Hukkeri) ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿದರು.
Advertisement
ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ದೆಹಲಿ ಕನ್ನಡಿಗರು ಸೇರಿದಂತೆ ರಾಜ್ಯದ ಜನರಿಗೆ ಶುಭ ಹಾರೈಸಿದರು. ಇನ್ನು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಕ್ತದಾನ ಹಾಗೂ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಇದನ್ನೂ ಓದಿ: ಮಕ್ಕಳಿಗೆ ಕನ್ನಡ ಭಾಷೆಯಲ್ಲೇ ಪರೀಕ್ಷೆ ಮಾಡುವಂತೆ ಪ್ರಧಾನಿಗೆ ಪತ್ರ ಬರೀತಿನಿ: ಸಿಎಂ
Advertisement
Advertisement
ಕಾರ್ಯಕ್ರಮದಲ್ಲಿ ಕರ್ನಾಟಕ ಭವನದ ಅಪರ ಮುಖ್ಯ ಕಾರ್ಯದರ್ಶಿ ವಂದನ ಗುರ್ನಾನಿ (ಸಮನ್ವಯ), ನಿವಾಸಿ ಆಯುಕ್ತ ಇಮ್ ಕೊಂಗ್ಲ ಜಮೀರ್, ಅಪರ ನಿವಾಸಿ ಆಯುಕ್ತ ಆಕೃತಿ ಬನ್ಸಲ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಿಬ್ಬಂದಿ ಪರಿವಾರದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು: ಸಿಎಂ ಘೋಷಣೆ
Advertisement
Web Stories