ಹುಬ್ಬಳ್ಳಿ: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ (Lok Sabha Elections 2024) ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಹುಬ್ಬಳ್ಳಿಯಲ್ಲಿ (Hubballi) ಒಂದೇ ಕುಟುಂಬದ 69 ಸದಸ್ಯರು ಮತದಾನ ಮಾಡಿದ್ದಾರೆ.
ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದ ಕನ್ನಡ ಹೆಣ್ಣುಮಕ್ಕಳ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿ ಕುಟುಂಬಸ್ಥರು ಇತರರಿಗೆ ಮಾದರಿಯಾಗಿದ್ದಾರೆ. ಮತ ಚಲಾಯಿಸಿದ ಬಳಿಕ ಎಲ್ಲರೂ ಸೇರಿ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: Lok Sabha Election: ಶಿವಮೊಗ್ಗದಲ್ಲಿ ಅತಿ ಹೆಚ್ಚು, ರಾಯಚೂರಿನಲ್ಲಿ ಕಡಿಮೆ ಮತದಾನ
Advertisement
Advertisement
ಮೂರು ತಲೆಮಾರಿನ ಕುಟುಂಬದ ಸದಸ್ಯರು ಇಂದು (ಮಂಗಳವಾರ) ಮತದಾನದಲ್ಲಿ ಭಾಗಿಯಾದರು. ಪ್ರತಿ ಚುನಾವಣೆಯಲ್ಲಿ ಮೂರು ತಂಡವಾಗಿ ವಾಹನ ಮೂಲಕ ಬಂದು ಕುಟುಂಬ ಮತ ಚಲಾವಣೆ ಮಾಡುತ್ತಿತ್ತು. ಆದರೆ ಈ ಚುನಾವಣೆಯಲ್ಲಿ ಏಕಕಾಲದಲ್ಲಿ ಬಂದು ಎಲ್ಲರೂ ಮತದಾನ ಮಾಡಿದ್ದಾರೆ.
Advertisement
Advertisement
ಯಾವ್ಯಾವ ಕ್ಷೇತ್ರದಲ್ಲಿ ಮತದಾನ?
ಕಲಬುರಗಿ, ಶಿವಮೊಗ್ಗ, ಬೆಳಗಾವಿ, ಹಾವೇರಿ, ಧಾರವಾಡ, ಬೀದರ್, ದಾವಣಗೆರೆ, ಚಿಕ್ಕೋಡಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು, ಉತ್ತರ ಕನ್ನಡ. ಇದನ್ನೂ ಓದಿ: ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಬಿಎಸ್‌ವೈ ಕುಟುಂಬ