ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ (Murugha Mutt) ಶ್ರೀಗಳ ವಿರುದ್ಧ 2ನೇ ಪೋಕ್ಸೋ (POCSO Act) ಕೇಸ್ ದಾಖಲಾಗಿದೆ. ಈ ಕುರಿತು ತನಿಖೆ ನಡೆಸಿರುವ ಡಿವೈಎಸ್ಪಿ (DYSP) ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ (Court) ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
Advertisement
ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ (Religious centre) ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್‌ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ (ChargeSheet) ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್- ಮಠದ ಹಾಸ್ಟೆಲ್‍ನಲ್ಲಿ ಇಬ್ಬರು ಬಾಲಕಿಯರು ಪತ್ತೆ
Advertisement
Advertisement
ಸೇಬು ನೀಡಿ ಮಕ್ಕಳ ಮೇಲೆ ಅತ್ಯಾಚಾರ: ಮುರುಘಾಶ್ರೀಗಳು ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು (Apple) ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ 2ನೇ ಫೋಕ್ಸೋ ಪ್ರಕರಣ- ಸಂತ್ರಸ್ತ ಬಾಲಕಿ, ತಾಯಿ ಹೇಳಿಕೆಯಲ್ಲಿ ಗೊಂದಲ
Advertisement
ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ. ಮಠದ ಹಾಸ್ಟೆಲ್ ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದ್ದು, ಶ್ರೀಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.