ಕೋಲಾರ: ತಾತ್ಕಾಲಿಕವಾಗಿ ನಡೆಯುತ್ತಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದ ಕಟ್ಟಡ ಕುಸಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಣಗಂಟಿ ಪಾಳ್ಯ ಸರ್ಕಲ್‍ನಲ್ಲಿ ನಡೆದಿದೆ.
ಬಿಸ್ನಹಳ್ಳಿ ಮೂಲದ ವಿದ್ಯಾರ್ಥಿನಿ ಜೋಸ್ನಾ ಮೃತಪಟ್ಟ ದುರ್ದೈವಿ. ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಜೋಸ್ನಾ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ದೇವರಾಯ ಸಮುದ್ರದ ಕೀಳುಹೊಳಲಿಯ 12 ಎಕರೆ ಜಮೀನಿನಲ್ಲಿ 21 ಕೋಟಿ ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಆದರಿಂದ ವಸತಿ ಶಾಲೆಯನ್ನು ಇರ್ಷಾದ್ ಎಂಬುವವರಿಗೆ ಸೇರಿದ ಖಾಸಗಿ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದ ವೇಳೆ ಏಕಾಏಕಿ ಕಟ್ಟಡ ಕುಸಿದ ಪರಿಣಾಮ ಆಕೆ ಅವಶೇಷಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
Advertisement
Advertisement
ಮೊರಾರ್ಜಿ ದೇಸಾಯಿ ಶಾಲೆಯು ಹಳೆಯ ಕಟ್ಟಡದಲ್ಲಿ ನಡೆಸುತ್ತಿದ್ದರಿಂದ ಹೇಳುವಷ್ಟು ಗಟ್ಟಿಯಾಗಿರಲಿಲ್ಲ. ಈ ವಿಷಯ ತಿಳಿದಿದ್ದರೂ ವಸತಿ ಶಾಲೆಯನ್ನು ಖಾಸಗಿ ಕಟ್ಟಡದಲ್ಲಿ ಮಾಡಿದ್ದೇ ವಿದ್ಯಾರ್ಥಿನಿ ಸಾವಿಗೆ ಕಾರಣವೆಂದು ಪೋಷಕರು ದೂರಿದ್ದಾರೆ. ಸದ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ ಜೆ. ಮಂಜುನಾಥ್, ತಹಶೀಲ್ದಾರ್ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv