ರಾಮನಗರ: ಶೀಘ್ರದಲ್ಲೇ ಸರ್ಕಾರದ 6ನೇ ಗ್ಯಾರಂಟಿ ಘೋಷಣೆ ಮಾಡಲಾಗುವುದು. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದರು.
ಮಾಗಡಿ ಕೋಟೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ 6ನೇ ಗ್ಯಾರಂಟಿ ಹೇಳಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡ್ತೇವೆ. ಶೀಘ್ರದಲ್ಲೇ 6ನೇ ಗ್ಯಾರಂಟಿ ಘೋಷಣೆ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ವಿಧಾನಸೌಧದ ಮೇಲೆ ಗುಂಬಜ್ ಬರುತ್ತೆ, ಲೌಡ್‌ಸ್ಪೀಕರ್‌ನಲ್ಲಿ ಆಜಾನ್ ಕೂಗುತ್ತೆ: ಪ್ರತಾಪ್ ಸಿಂಹ

ಕಳೆದ 5 ವರ್ಷದಿಂದ ಸಂಸದ ಡಿ.ಕೆ.ಸುರೇಶ್ ನಿಮ್ಮ ಸೇವೆ ಮಾಡಿದ್ದಾರೆ. ರಾಜಕಾರಣದಲ್ಲಿ ಅಧಿಕಾರ ಸಿಕ್ಕಾಗ ಜನಸೇವೆ ಮಾಡುವವರು ಬೆರಳೆಣಿಕೆ ಮಂದಿ. ಅದರಲ್ಲಿ ಡಿ.ಕೆ.ಸುರೇಶ್ ಕೂಡಾ ಒಬ್ಬರು. ಕಾಂಗ್ರೆಸ್ ಅಂದ್ರೆ ಬದ್ಧತೆ. ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿ ಮಾಡಿ ನುಡಿದಂತೆ ನಡೆದಿದೆ. ವಿಪಕ್ಷಗಳು ನಮ್ಮನ್ನು ಟೀಕೆ ಮಾಡಿದವು. ನಮ್ಮದು ನುಡಿದಂತೆ ನಡೆದ ಸರ್ಕಾರ. ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಗೃಹಲಕ್ಷ್ಮಿ ಅನುಕೂಲ ಆಗಿದೆ ಎಂದರು.
ನಾನೂ ಕೂಡಾ ರಾಮನಭಕ್ತೆ. ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದಾರೆ. ತುಂಬಾ ಸಂತೋಷ. ಐದು ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಆದರೆ, ನಮ್ಮ ಸರ್ಕಾರ ಒಂದು ತಿಂಗಳಿಗೆ ಮಹಿಳೆಯರಿಗೆ 4 ಸಾವಿರ ಕೋಟಿ ನೀಡಿ ರಾಮರಾಜ್ಯ ಸ್ಥಾಪನೆಗೆ ಮುಂದಾಗಿದೆ ಎಂದು ಬಿಜೆಪಿಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗ – ಸೂಲಿಬೆಲೆಯ ಚಿತ್ತಾಪುರ ಕಾರ್ಯಕ್ರಮಕ್ಕೆ ಅನುಮತಿ
ಜನರಿಗೆ ನೀರು, ಹಾಲು, ಮಜ್ಜಿಗೆಯ ವ್ಯತ್ತಾಸ ಗೊತ್ತಿದೆ. ನಮ್ಮ ಗ್ಯಾರಂಟಿಗಳನ್ನ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಮಾಗಡಿಯಲ್ಲೇ 51 ಸಾವಿರ ಕುಟುಂಬಗಳು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿವೆ. ನಾವು ಅದಾನಿ, ಅಂಬಾನಿಗೆ ಸಹಾಯ ಮಾಡ್ತಿಲ್ಲ. ನಾವು ನಮ್ಮ ಬಡ ಹೆಣ್ಣುಮಕ್ಕಳಿಗೆ ಸಹಾಯ ಮಾಡುತ್ತಿದ್ದೇವೆ. ಶಕ್ತಿ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಸ್ವಾಭಿಮಾನದಿಂದ ಓಡಾಡಬಹುದು. ಕೆಲವರು ಅಧಿಕಾರದಲ್ಲಿ ಇದ್ದಾಗ ಒಂದು ಬಣ್ಣ, ಇಲ್ಲದಿದ್ದಾಗ ಒಂದು ಬಣ್ಣ. ಆದರೆ ಡಿ.ಕೆ.ಸುರೇಶ್ ಯಾವಾಗಲೂ ಕೆಲಸ ಮಾಡೋ ರಾಜಕಾರಣಿ. ಅವರಿಗೆ ಮತ್ತೊಂದು ಅವಕಾಶ ಸಿಗಬೇಕು. ಅವರು ಗೆದ್ದರೆ ಮುಂದಿನ ವಿಧಾನಸಭಾ ಚುನಾವಣೆ ಗೆದ್ದ ಹಾಗೆ ಎಂದು ಶಾಸಕ ಬಾಲಣ್ಣ ಹೇಳಿದ್ರು. ಹಾಗಾಗಿ ಅವರು ಗೆದ್ದರೆ ಅವರೇ ಎಲ್ಲಾ ಕೆಲಸಗಳನ್ನ ಮಾಡ್ತಾರೆ ಎಂದರು.

