ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಸಭೆ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಏಪ್ರಿಲ್ 10 ರಿಂದ 20ರವರೆಗೆ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದೆ.
ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಿಎಸ್‍ವೈ, ಬೆಂಗಳೂರು, ಮೈಸೂರು, ಕಲಬುರಗಿ, ಮಣಿಪಾಲ, ತುಮಕೂರು, ಬೀದರ್, ಉಡುಪಿ, ಮಂಗಳೂರು ನಗರಗಳಲ್ಲಿ ಪ್ರಾಯೋಗಿಕವಾಗಿ ಕೊರೊನಾ ಕರ್ಫ್ಯೂ ಬರಲಿದೆ. ಅಗತ್ಯ ಸೇವೆಗಳನ್ನ ಹೊರತುಪಡಿಸಿ ಎಲ್ಲ ಕಮರ್ಷಿಯಲ್ ಚಟುವಟಿಕೆಗಳ ಮೇಲೆ ನಿರ್ಬಂಧ ಹಾಕಲಾಗ್ತಿದೆ. ಲಾಕ್‍ಡೌನ್ ಬೇಡ ಅಂದ್ರೆ ಜನರು ಕೊರೊನಾ ನಿಯಮಗಳನ್ನ ಪಾಲಿಸಬೇಕು. ನಾಳೆಯಿಂದ ಮಾಸ್ಕ್ ಧರಿಸದಿದ್ದರೆ ದಂಡಾಸ್ತ್ರ ಪ್ರಯೋಗಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಕರ್ಫ್ಯೂ ಅಭಾದಿತ ಆಗಿರುತ್ತೆ. ವಾಹನ ಸಂಚಾರ ಇರಲಿದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ನಿಯಮಗಳನ್ನ ತರಲಾಗುತ್ತದೆ. ಕೊರೊನಾ ಹೆಚ್ಚಳವಾಗಿರುವ ನಗರಗಳಲ್ಲಿ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದೆ ಎಂದರು.
ಎಂಟಯ ನಗರಗಳಲ್ಲಿ 10 ದಿನ ಪ್ರಾಯೋಗಿಕವಾಗಿ ಕೊರೊನಾ ಕರ್ಫ್ಯೂವನ್ನ ಸರ್ಕಾರ ಘೋಷಣೆ ಮಾಡಿದೆ. ಕರ್ಫ್ಯೂ ಅವಧಿ ವೇಳೆ ಹೊಟೇಲ್, ಬಾರ್, ಪಬ್, ನೈಟ್ ಪಾರ್ಟಿ, ರೆಸ್ಟೋರೆಂಟ್, ಸಿನಿಮಾಗಳು ಬಂದ್ ಆಗಲಿವೆ ಎನ್ನಲಾಗಿದೆ.
ಏಪ್ರಿಲ್ 11 ರಿಂದ 14ರವರೆಗೆ ದೇಶದಲ್ಲಿ ಲಸಿಕೆ ಉತ್ಸವ: ಪ್ರಧಾನಿ ಮೋದಿ ಕರೆ
– ಸ್ಯಾಂಪಲ್ ಸಂಗ್ರಹ ವೇಳೆಯಲ್ಲಿನ ಎಡವಟ್ಟಿಗೆ ಬೇಸರ
– ಲಸಿಕೆಯ ವ್ಯರ್ಥವನ್ನ ತಡೆಯೋಣ https://t.co/BGcndyWaRx#CoronaVirus #COVID19 #KannadaNews #TikaUtsav #VaccinationUtsav #PMModi
— PublicTV (@publictvnews) April 8, 2021