ಮುಂಬೈ: ಮೊಬೈಲ್ ಅಂಗಡಿಯೊಂದರಿಂದ 7 ಲಕ್ಷ ಬೆಲೆಬಾಳುವ 46 ಮೊಬೈಲ್ ಫೋನ್‍ಗಳನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಅಜ್ಮತ್ ಅಲಿ ಶೇಖ್ (46) ಎಂದು ಗುರುತಿಸಲಾಗಿದೆ. ಆರೋಪಿಯ ಕಿರಿಯ ಸಹೋದರ ಕೂಡ ಕಳ್ಳತನದಲ್ಲಿ ಭಾಗಿಯಾಗಿದ್ದು, ಈಗ ಪರಾರಿಯಾಗಿದ್ದಾನೆ. ಬಂಧಿತ ಆರೋಪಿ ಶೇಖ್‍ನಿಂದ 7 ಲಕ್ಷ ರೂಪಾಯಿ ಮೌಲ್ಯದ 46 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಮತಾ ನಗರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಕಳೆದ ತಿಂಗಳು ಸಮುತಾ ನಗರದ ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 46 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಸಿದ್ದಾರ್ಥನಗರದಿಂದ ಬಂಧಿಸಲಾಗಿದೆ. ಆರೋಪಿಗಳಿಬ್ಬರು ಮೊಬೈಲ್ ಅಂಗಡಿಯೊಂದಕ್ಕೆ ನುಗ್ಗಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಗಳೊಂದಿಗೆ ಪರಾರಿಯಾಗಿದ್ದರು.
Advertisement
Advertisement
ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿ ಆರೋಪಿಗಳನ್ನು ಗುರುತಿಸಿದೆವು. ನಲಸೋಪರಾದಲ್ಲಿರುವ ಆರೋಪಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದೆವು. ಆದರೆ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಆಗ ಆರೋಪಿಗಳ ನೆರೆಹೊರೆಯವರನ್ನು ಪ್ರಶ್ನಿಸಿದಾಗ ಆರೋಪಿಗಳು ಉತ್ತರಪ್ರದೇಶದಲ್ಲಿರುವ ಅವರ ಊರಿಗೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿತ್ತು. ಹೀಗಾಗಿ ಉತ್ತರದೇಶದಲ್ಲಿರುವ ಅವರ ಮನೆಯ ಮೇಲೆ ದಾಳಿ ಮಾಡಿದಾಗ ಒಬ್ಬ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಸ್ಥಳದಿಂದ 46 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಸಹೋದರ ಬಹುಶಃ ಉಳಿದ ಫೋನ್ ಗಳೊಂದಿಗೆ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎಂದು ಸಮತಾ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳು ಉನ್ನತ ಮಟ್ಟದ ಮೊಬೈಲ್ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು. ಈ ಇಬ್ಬರು ಖದೀಮರ ವಿರುದ್ಧ ನಲಸೋಪರಾ ಸಕಿನಾಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮೊದಲು ಎಷ್ಟು ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕು. ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಈ ಪ್ರಕರಣ ಕುರಿತಾಗಿ ತನಿಖೆ ನಡೆಸುತ್ತೇವೆ ಎಂದು ಡಿಸಿಪಿ ಡಿಎಸ್ ಸ್ವಾಮಿ ತಿಳಿಸಿದ್ದಾರೆ.