ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲಾ-ಕಾಲೇಜುನಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಿಗೆ 7.5% ವಿಶೇಷ ಮೀಸಲಾತಿ (Reservation) ನೀಡುವ ಯೋಜನೆಗೆ ಸರ್ಕಾರ ಕರಡು ನಿಯಮ ಪ್ರಕಟಿಸಿದೆ.
ಕರಡು ನಿಯಮಕ್ಕೆ ಆಕ್ಷೇಪಣೆ ಮತ್ತು ಸಲಹೆಗಳನ್ನ ಆಹ್ವಾನಿಸಿದೆ. ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026 ಅಧಿಸೂಚನೆ ಇದಾಗಿದೆ. ಇದನ್ನೂ ಓದಿ: ಬಾಗಿಲಿಗೆ ಬಂದಿದೆ ಸರ್ಕಾರ, ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7 ಮೀಸಲಾತಿ: ಪ್ರಜಾಸೇವಾ ಇಲಾಖೆಗೆ ಡಿಕೆಶಿ ಚಾಲನೆ
ಇದೂವರೆಗೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ 15% ಮೀಸಲಾತಿ ನೀಡಲಾಗುತ್ತಿತ್ತು. ಇದರಲ್ಲಿ ಇನ್ನುಮುಂದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ರಷ್ಟು ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಯಾವುದೇ (ಖಾಸಗಿ ಸೇರಿದಂತೆ) ಶಿಕ್ಷಣ ಸಂಸ್ಥೆಗಳು/ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಶೇಕಡ 7.5 ರಷ್ಟು ಮೀಸಲಾತಿ ನೀಡಲಾಗುತ್ತದೆ. ಇದನ್ನೂ ಓದಿ: ಸಾವಿರ ಸಲ ಹೇಳುತ್ತೇನೆ, ನಾನು ತಪ್ಪೇ ಮಾಡಿಲ್ಲ: 4 ಗಂಟೆ ಇ.ಡಿ ವಿಚಾರಣೆ ಬಳಿಕ ನಾಗೇಂದ್ರ ಸ್ಪಷ್ಟನೆ
