ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಶುಕ್ರವಾರ ಘೋಷಿಸಿದರು.
Advertisement
ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಮೇ 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಯುದ್ಧ ನೌಕೆಗಳು ತಯಾರಾಗೋ ಮೂಲಕ ಮೋದಿ ಆತ್ಮನಿರ್ಭರ್ ಅಭಿಯಾನಕ್ಕೆ ಬಲ ಬಂದಿದೆ: ರಾಜನಾಥ್ ಸಿಂಗ್
Advertisement
Advertisement
ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ, ಟಿ ನಾರಾಯಣ ಸ್ವಾಮಿ, ಹೇಮಾಲತಾ ನಾಯಕ್ ಹಾಗೂ ಕೇಶವ್ ಪ್ರಸಾದ್ ಎಸ್, ಭಾರತೀಯ ಕಾಂಗ್ರೆಸ್ ಪಕ್ಷದಿಂದ ಕೆ ಅಬ್ದುಲ್ ಜಬ್ಬಾರ್ ಹಾಗೂ ಎಂ ನಾಗರಾಜು, ಜೆಡಿಎಸ್ ಪಕ್ಷದಿಂದ ಶರವಣನ್ ಟಿ ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ
Advertisement
ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸಿದರು.