ಲಕ್ನೋ: ವಾಹನವೊಂದು ಕಾಲುವೆಗೆ ಬಿದ್ದ ಪರಿಣಾಮ ಏಳು ಮಂದಿ ಮಕ್ಕಳು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದಲ್ಲಿ ನಡೆದಿದೆ.
ವಾಹನದಲ್ಲಿ ಸುಮಾರು 29 ಜನರು ಪ್ರಯಾಣ ಮಾಡುತ್ತಿದ್ದರು. ಎಲ್ಲಾ ಪ್ರಯಾಣಿಕರು ಮದುವೆಯಿಂದ ಹಿಂದಿರುಗುತ್ತಿದ್ದರು. ಆದರೆ ನಾಗ್ರಾಮ್ ಪ್ರದೇಶದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಮುಂಜಾನೆ 3 ಗಂಟೆ ಸುಮಾರಿಗೆ ನಾಗ್ರಾಮ್ ಪ್ರದೇಶದ ಇಂದಿರಾ ಕಾಲುವೆಗೆ ಬಿದ್ದಿದೆ. ಪರಿಣಾಮ ಏಳು ಮಕ್ಕಳು ಮೃತಪಟ್ಟಿದ್ದಾರೆ.
Advertisement
ವಾಹನ ಕಾಲುವೆಗೆ ಬಿದ್ದ ತಕ್ಷಣ ಸ್ಥಳೀಯರು 22 ಮಂದಿ ಅಪ್ರಾಪ್ತರನ್ನು ರಕ್ಷಿಸಿದ್ದಾರೆ. ಈ ಅವಘಡದ ಮಾಹಿತಿ ತಿಳಿದ ತಕ್ಷಣ ರಕ್ಷಣಾ ಕಾರ್ಯಾಚರಣೆಗಾಗಿ ಎನ್‍ಡಿಆರ್‍ಎಫ್‍ನ ತಂಡ ಸ್ಥಳಕ್ಕೆ ದೌಡಾಯಿಸಿದೆ. ಸದ್ಯಕ್ಕೆ ಮಕ್ಕಳ ಗುರುತು ಪತ್ತೆಯಾಗಿಲ್ಲ.
Advertisement
A vehicle carrying passengers fell in Indira canal in Nagram, Lucknow, today morning. Rescue operations underway. Chief Minister has taken cognizance of the incident and directed the SSP and the SDRF to make all possible efforts for search & rescue of the persons who have drowned pic.twitter.com/pHDfJ39EM3
— ANI UP/Uttarakhand (@ANINewsUP) June 20, 2019
Advertisement
ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಕಷ್ಟವಾಗುತ್ತಿದೆ. ಆದರೂ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸದ್ಯಕ್ಕೆ ಕಾಲುವೆಯಲ್ಲಿ ನೀರಿನ ಹರಿವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಎಸ್.ಕೆ.ಭಗತ್ ತಿಳಿಸಿದ್ದಾರೆ.
Advertisement
ಈ ಘಟನೆಯ ಬಗ್ಗೆ ತಿಳಿದ ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವಂತೆ ಆದೇಶಿಸಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]