ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (LOC) ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ (Pakistan) ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ 7 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ (POK) ಭಯೋತ್ಪಾದಕ ತಾಣಗಳನ್ನು ಗುರಿಯಾಗಿರಿಸಿಕೊಂಡು ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದೆ. ಸುಮಾರು 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಸಬ್, ಡೇವಿಡ್ ಹೆಡ್ಲಿ ತರಬೇತಿ ಪಡೆದ ಕ್ಯಾಂಪ್ ಧ್ವಂಸ: ಭಾರತ
ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ (Operation Sindoor) ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್‌ಸ್ಟ್ರೈಕ್ ನಡೆಸಿತು. ಸುಮಾರು 100ಕ್ಕೂ ಹೆಚ್ಚು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ. ಇದನ್ನೂ ಓದಿ: Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್ – ಗೂಗಲ್‌ನಲ್ಲಿ ಟ್ರೆಂಡ್
ಈ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಶೆಲ್ ದಾಳಿ ನಡೆಸಿ 7 ನಾಗರಿಕರನ್ನು ಬಲಿ ತೆಗೆದುಕೊಂಡಿದೆ. ಶೆಲ್ ದಾಳಿಯಿಂದಾಗಿ ಪೂಂಚ್‌ನ ವಿವಿಧ ಪ್ರದೇಶಗಳಲ್ಲಿ 35ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರದ ಮೂಲಕ ನರಮೇಧಕ್ಕೆ ಉತ್ತರ: ಅಮಿತ್ ಶಾ ಶ್ಲಾಘನೆ