ಇಂಫಾಲ: ಮಣಿಪುರದ ನೋನಿ ಜಿಲ್ಲೆಯ ಪಟ್ಟಣವೊಂದರಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 13 ಮಂದಿ ಗಾಯಗೊಂಡಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭೂಕುಸಿತದಿಂದಾಗಿ ಹತ್ತಿರದ ನದಿ ಹರಿವಿಗೂ ಅಡ್ಡಿಯಾಗಿದೆ. ಅವಶೇಷಗಳ ತೆರವಿನಿಂದ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ಪರಿಸರ ನಾಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ನೀಡಿದ್ದು, ಮಕ್ಕಳನ್ನು ನದಿ ಬಳಿ ಹೋಗಲು ಬಿಡದಂತೆ ಅಧಿಕಾರಿಗಳು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಾಟೆ – ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
Advertisement
Advertisement
ದುರಂತದಲ್ಲಿ ಸಾವನ್ನಪ್ಪಿದ ಹೆಚ್ಚಿನವರು ಸೇನೆಗೆ ಸೇರಿದವರು ಎನ್ನಲಾಗಿದೆ. ನಾಪತ್ತೆಯಾದವರ ಹುಡುಕಾಟ ಹಾಗೂ ರಕ್ಷಣೆಗೆ ಜಿಲ್ಲಾಡಳಿತ ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ. ನಿರಂತರ ಮಳೆಯಿಂದಾಗಿ ಪರಿಸ್ಥಿತಿ ಉಲ್ಬಣಗೊಳ್ಳುವ ಸಾಧ್ಯತೆ ಇದೆ ಎಂದು ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಆಪರೇಷನ್ ಮಾಡಿ 15 ದಿನವಾದ್ರೂ ಹೊಲಿಗೆ ಇಲ್ಲ- ವೈದ್ಯರ ನಿರ್ಲಕ್ಷ್ಯಕ್ಕೆ ಹೋಯ್ತು ವೃದ್ಧೆ ಜೀವ
Advertisement
Hon’ble CM N Biren Singh inspected the site of the massive landslide at Tupul, Noney District and personally supervised the relief and rescue operations in the disaster hit area. pic.twitter.com/sQUiMnylOz
— CMO Manipur (@manipur_cmo) June 30, 2022
Advertisement
ಘಟನೆ ಬಳಿಕ ತುರ್ತು ಸಭೆ ನಡೆಸಿದ ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್, ಈಗಾಗಲೇ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಯಾಚರಣೆಗೆ ಸಹಾಯವಾಗಲು ವೈದ್ಯರೊಂದಿಗೆ ಆಂಬುಲೆನ್ಸ್‌ಗಳನ್ನೂ ಕಳುಹಿಸಲಾಗಿದೆ. ಎಲ್ಲರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ.