ಚೆನ್ನೈ: ಕನ್ನಿಗೈಪೈರ್‌ನಲ್ಲಿರುವ ಖಾಸಗಿ ಸೀಫುಡ್ ರಫ್ತು ಘಟಕದಲ್ಲಿ (Seafood Unit) ಭಾನುವಾರ ಅಮೋನಿಯಾ ಅನಿಲ ಸೋರಿಕೆಯಾಗಿ 7 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ತಿರುವಲ್ಲೂರು ಜಿಲ್ಲೆಯ ಪೆರಿಯಪಾಳಯಂ ಬಳಿ ಈ ದುರಂತ ಸಂಭವಿಸಿದೆ. ಅಸ್ಸಾಂ, ಒಡಿಶಾ ಮತ್ತು ಜಾರ್ಖಂಡ್‌ನ ಮಹಿಳೆಯರು ಸೇರಿದಂತೆ ಸುಮಾರು 120 ಅತಿಥಿ ಕಾರ್ಮಿಕರು ಕಾರ್ಖಾನೆ ಆವರಣದಲ್ಲಿ ತಂಗಿದ್ದರು. ರಜಾದಿನವಾಗಿದ್ದರಿಂದ ಅವರು ತಮ್ಮ ವಸತಿ ಸೌಕರ್ಯದೊಳಗೆ ಇದ್ದರು. ಇದನ್ನೂ ಓದಿ: ಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯ
ಸೀಫುಡ್ ಸಂಸ್ಕರಣಾ ಘಟಕದಿಂದ ಅಮೋನಿಯಾ ಸೋರಿಕೆಯಾಗಿ ಆವರಣದಾದ್ಯಂತ ಹರಡಿ, ಹಲವಾರು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಿದೆ. ಹಲವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರೆ, ಇನ್ನು ಕೆಲವರು ಬಾಯಿ ಮತ್ತು ಮೂಗಿನ ರಕ್ತಸ್ರಾವದಿಂದ ಬಳಲುತ್ತಿದ್ದರು.
ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಅಲ್ಲಿ ಏಳು ಮಂದಿ ಸಾವನ್ನಪ್ಪಿದರು. ಗಂಭೀರ ಸ್ಥಿತಿಯಲ್ಲಿದ್ದ ಇತರ ಒಂಬತ್ತು ಜನರನ್ನು ನಂತರ ಖಾಸಗಿ ಆಸ್ಪತ್ರೆಯಿಂದ ಚೆನ್ನೈನ ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಪೆರಿಯಪಾಳಯಂ ಪೊಲೀಸ್ ಠಾಣೆ, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಇದನ್ನೂ ಓದಿ: ಕೇರಳದ ಕಡಲಲ್ಲಿ ಮುಳುಗಿ ನೆಲಮಂಗಲದ ಯುವಕ ಸಾವು – ಮೊಬೈಲ್‌ನಲ್ಲಿ ದೃಶ್ಯ ಸೆರೆ
