ಬ್ರೆಸಿಲಿಯಾ: ಜಲಪಾತವೊಂದರ ಬಳಿ ಭಾರೀ ಗಾತ್ರದ ಕಲ್ಲಿನ ಗೋಡೆ ಜರಿದು ದೋಣಿಗಳಲ್ಲಿ ಬಂದಿದ್ದ ಪ್ರವಾಸಿಗರಲ್ಲಿ 7 ಮಂದಿ ಸಾವನ್ನಪಿದ್ದಾರೆ ಹಾಗೂ 9 ಮಂದಿಗೆ ತೀವ್ರವಾದ ಗಾಯಗಳಾಗಿವೆ. ಘಟನೆ ಬ್ರೆಜಿಲ್‌ನ ಮಿನಾಸ್ ಗೈಸ್ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕ್ಯಾಪಿಟೋಲಿಯೋ ಕಣಿವೆಯಲ್ಲಿ ಶನಿವಾರ ನಡೆದಿದೆ.
ಶನಿವಾರ ಜಲಪಾತದ ಸರೋವರದ ಕಡೆ ಹಲವು ದೋಣಿಗಳಲ್ಲಿ ಪ್ರವಾಸಿಗರು ಹೋಗಿದ್ದರು. ಈ ಸಂದರ್ಭದಲ್ಲಿ ಜಲಪಾತದ ಕಲ್ಲಿನ ಒಂದು ಭಾಗ ಮುರಿದು ಎರಡು ದೋಣಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮ ಎರಡು ದೋಣಿಗಳಲ್ಲಿದ್ದ 7 ಜನರು ಮೃತಪಟ್ಟಿದ್ದಾರೆ. ಇನ್ನೂ ನೀರಿನಲ್ಲಿ ಕಾಣೆಯಾಗಿರುವ ಮೂವರ ಹುಡುಕಾಟ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮರ‍್ರೆಯಲ್ಲಿ ಭಾರೀ ಹಿಮಪಾತ – 10 ಮಕ್ಕಳು ಸೇರಿ 22 ಮಂದಿ ಬಲಿ
Advertisement
Advertisement
23 ಮಂದಿ ಇತರ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಭಾರೀ ಗಾತ್ರದ ಕಲ್ಲಿನ ಭಾಗ ಮುರಿದು ಬೀಳುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲೂ ಹರಿದಾಡುತ್ತಿವೆ. ಇದನ್ನೂ ಓದಿ: ರೈಲಿನಿಂದ ಬಿದ್ದ ಪ್ರಯಾಣಿಕನ ರಕ್ಷಣೆ
Advertisement
URGENTE!!! Pedras se soltam de cânion em Capitólio, em Minas, e atingem três lanchas. pic.twitter.com/784wN6HbFy
— O Tempo (@otempo) January 8, 2022
Advertisement
ಕಳೆದ ಎರಡು ವಾರಗಳಿಂದ ಭಾರೀ ಮಳೆಯಾಗಿದ್ದು, ಬಂಡೆ ಕಲ್ಲು ಜರಿಯಲು ಮೂಲ ಕಾರಣ ಇದೇ ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.