ಮುಂಬೈ: ಟ್ರಕ್ಗೆ ಬಸ್ ಡಿಕ್ಕಿ ಹೊಡೆದ (BUS Accident) ಪರಿಣಾಮ ಸ್ಥಳದಲ್ಲೇ ಏಳು ಜನರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharashtra) ಬುಲ್ಧಾನಾ ಜಿಲ್ಲೆಯ ನಾಗ್ಪುರ-ಪುಣೆ ಹೆದ್ದಾರಿಯಲ್ಲಿ (Nagpur-Pune Highway) ಮಂಗಳವಾರ ನಡೆದಿದೆ.
ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ವಾಹನಗಳು ಮಿತಿ ಮೀರಿದ ವೇಗದಲ್ಲಿ ಚಲಿಸುತ್ತಿದ್ದ ಕಾರಣ ಈ ಅಪಘಾತ ಸಂಭವಿಸಿದೆ. ಅತಿ ವೇಗದ ಪರಿಣಾಮ ಎರಡು ವಾಹನಗಳೂ ಸಂಪೂರ್ಣ ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಹಿಂದೂ ಸಂಘಟನೆಗಳಿಂದ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಖಡಕ್ ಸೂಚನೆ ಕೊಟ್ಟ ಎಡಿಜಿಪಿ
Advertisement
Advertisement
ಅಪಘಾತ ನಡೆದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡು ಹಲವರನ್ನು ಹೊರತೆಗೆದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗಳಿಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಮರಗಳು ಉರುಳಿ ಬಿದ್ದಿದ್ದಕ್ಕೆ ಕಾರಣ ಸಿಕ್ತು