– ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಸಾವು
– 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ; ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಬೆಂಗಳೂರು: ಆರ್ಸಿಬಿ (RCB) ಗೆಲುವು ವಿಜಯೋತ್ಸವದ ವೇಳೆ ಯಡವಟ್ಟು ಸಂಭವಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಸಂಭವಿಸಿದ ಕಾಲ್ತುಳಿತಕ್ಕೆ (Stampede) 10 ಆರ್ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ 5 ಹಾಗೂ ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಒಬ್ಬರು ಅಭಿಮಾನಿಗಳು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಮೃತಪಟ್ಟವರು ಯಲಹಂಕ ಮೂಲದ ಓರ್ವ ಯುವತಿ ಹಾಗೂ 6 ಯುವಕರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಆರ್ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
18ನೇ ಆವೃತ್ತಿಯ ಐಪಿಎಲ್ ಟ್ರೋಫಿ ಗೆಲುವನ್ನು ಸಂಭ್ರಮಿಸಲು ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದರು. ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಸೇರಿದಂತೆ ರಜತ್ ಪಾಟೀದಾರ್ ಪಡೆಗೆ ಆರ್ಸಿಬಿ ಫ್ಯಾನ್ಸ್ ಅದ್ಧೂರಿ ಸ್ವಾಗತ ಕೋರಿದರು.
ವಿಶೇಷ ಬಸ್ನಲ್ಲಿ ವಿಧಾನಸೌಧಕ್ಕೆ ಆಟಗಾರರನ್ನು ಕರೆತರಲಾಯಿತು. ಈ ವೇಳೆ ಮಾರ್ಗದುದ್ದಕ್ಕೂ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿ ಆಟಗಾರರನ್ನು ಅಭಿನಂದಿಸಿದರು. ಫ್ಯಾನ್ಸ್ ಕ್ರೇಜ್ ನೋಡಿ ಆಟಗಾರರು ಖುಷಿಪಟ್ಟರು. ಇದನ್ನೂ ಓದಿ: ಆರ್ಸಿಬಿ ಗೆಲುವಿನ ನಶೆಯಲ್ಲಿ ತೇಲಿದ ಫ್ಯಾನ್ಸ್ – ಒಂದೇ ದಿನ 157 ಕೋಟಿ ಎಣ್ಣೆ ಸೇಲ್
ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಇತ್ತು. ಸಮಾರಂಭದಲ್ಲಿ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಸ್ಟೇಡಿಯಂ ಬಳಿ ನೆರೆದಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.