ಲಕ್ನೋ: ಬಹ್ಮೈಚ್ ಹಾಗೂ ಲಖಿಂಪುರ ಹೆದ್ದಾರಿಯಲ್ಲಿ ಪ್ರವಾಸಿ ಬಸ್ ಟ್ರಕ್‍ಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಅಯೋಧ್ಯೆಗೆ ಬಸ್‍ನಲ್ಲಿ ಕರ್ನಾಟಕದ ಬೀದರ್‌ನ 16 ಜನರು ಸಾಗುತ್ತಿದ್ದರು. ಈ ಬಸ್ ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್‍ಗೆ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
Advertisement
Advertisement
ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಮೃತಪಟ್ಟವರೆಲ್ಲರೂ ಬೀದರ್‌ನ ಗುಂಪಾ ಹಾಗೂ ಸುಲ್ತಾನಪುರ್ ಗ್ರಾಮದದವರೆಂದು ಗುರುತಿಸಲಾಗಿದೆ. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಬ್ರಾನಚೀ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ
Advertisement
Advertisement
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಗ್ರಾಮದೇವತೆಗೆ ಉಡಿ ತುಂಬುವಾಗ ದಲಿತರಿಗೆ ಬಹಿಷ್ಕಾರ ಆರೋಪ