BidarCrimeDistrictsKarnatakaLatestMain PostNational

ಬಸ್- ಟ್ರಕ್ ಮುಖಾಮುಖಿ ಡಿಕ್ಕಿ- ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ 7 ಜನರ ದುರ್ಮರಣ

ಲಕ್ನೋ: ಬಹ್ಮೈಚ್ ಹಾಗೂ ಲಖಿಂಪುರ ಹೆದ್ದಾರಿಯಲ್ಲಿ ಪ್ರವಾಸಿ ಬಸ್ ಟ್ರಕ್‍ಗೆ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅಯೋಧ್ಯೆಗೆ ಬಸ್‍ನಲ್ಲಿ ಕರ್ನಾಟಕದ ಬೀದರ್‌ನ 16 ಜನರು ಸಾಗುತ್ತಿದ್ದರು. ಈ ಬಸ್ ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್‍ಗೆ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಮೃತಪಟ್ಟವರೆಲ್ಲರೂ ಬೀದರ್‌ನ ಗುಂಪಾ ಹಾಗೂ ಸುಲ್ತಾನಪುರ್ ಗ್ರಾಮದದವರೆಂದು ಗುರುತಿಸಲಾಗಿದೆ. 9 ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಬ್ರಾನಚೀ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಗ್ರಾಮದೇವತೆಗೆ ಉಡಿ ತುಂಬುವಾಗ ದಲಿತರಿಗೆ ಬಹಿಷ್ಕಾರ ಆರೋಪ

Leave a Reply

Your email address will not be published.

Back to top button